Breaking News

ಕೊರೊನಾ ಲಾಕ್ ಡೌನ್ ನಡುವೆಯೇ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆ

Spread the love

ದೆಹಲಿ: ಕೊರೊನಾ ಲಾಕ್ ಡೌನ್ ನಡುವೆಯೇ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ದರ ಲೀಟರ್ ಗೆ 25 ರಿಂದ 26 ಪೈಸೆ ಹಾಗೂ ಡೀಸೆಲ್ ದರ ಲೀಟರ್ ಗೆ 28ರಿಂದ 30 ಪೈಸೆ ಹೆಚ್ಚಳವಾಗಿದೆ.

ಮೇ ತಿಂಗಳಲ್ಲಿ ಈವರೆಗೆ 15 ಬಾರಿ ತೈಲ ಬೆಲೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂ ಗಡಿ ದಾಟಿದ್ದು, 100.19 ರೂಪಾಯಿಯಾಗಿದೆ. ಡೀಸೆಲ್ ದರ 92.17 ರೂಪಾಯಿ ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 93.94 ರೂಪಾಯಿಯಾಗಿದ್ದು, ಡೀಸೆಲ್ ದರ 84.89ರೂಪಾಯಿಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ 97.7 ರೂ ಆಗಿದ್ದರೆ ಡೀಸೆಲ್ ದರ 89.99 ರೂಪಾಯಿಯಾಗಿದೆ. ಚೆನ್ನೈ ನಲ್ಲಿ ಪೆಟ್ರೋಲ್-95.51 ರೂಪಾಯಿಯಾಗಿದ್ದರೆ ಡೀಸೆಲ್ ದರ ಲೀಟರ್ ಗೆ 89.65 ರೂ ಆಗಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ