Breaking News

ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹ: M.G..ಹಿರೇಮಠ

Spread the love

ಬೆಳಗಾವಿ  : ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಂದ ಒಟ್ಟಾರೆ 45,29,250 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಕುರಿತು 36,352 ಪ್ರಕರಣಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ 240 ಪ್ರಕರಣಗಳು ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ಅಡಿಯಲ್ಲಿ 117 ಪ್ರಕರಣಗಳು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ 7 ದಿನಗಳಿಂದ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಕುರಿತು 6,043 ಪ್ರಕರಣಗಳು ಹಾಗೂ ಒಟ್ಟು 75,6700 ರೂ. ದಂಡ ಸಂಗ್ರಹಿಸಿಲಾಗಿದೆ ಎಂದು ಅವರು ತಿಳಿಸಿದ್ದಾರೆ.

Spread the love

About Laxminews 24x7

Check Also

ಕೆ.ಎಸ್.ಆರ್.ಟಿ.ಸಿ ವಿಭಾಗಮಟ್ಟದ ಕುಂದು ಕೊರತೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

Spread the loveಕೆ.ಎಸ್.ಆರ್.ಟಿ.ಸಿ ವಿಭಾಗಮಟ್ಟದ ಕುಂದು ಕೊರತೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ನಗರದಲ್ಲಿ ಮಾನ್ಯ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ