Breaking News

ಕೊರೊನಾ ಸೋಂಕಿಗೆ ನಾಟಿ ಔಷಧ ನೀಡುತ್ತಿದ್ದ ಮಹಿಳೆಗೆ ತಹಶೀಲ್ದಾರ್​ ಎಚ್ಚರಿಕೆ

Spread the love

ಬಳ್ಳಾರಿ: ಕೊರೊನಾ ಸೋಂಕಿಗೆ ನಾಟಿ ಔಷಧ ನೀಡುತ್ತಿದ್ದ ಮಹಿಳೆಗೆ ಜಿಲ್ಲೆಯ ಸಂಡೂರು ತಾಲೂಕಿನ ತಹಶೀಲ್ದಾರ್​ ರಶ್ಮಿ ಅವರು ಎಚ್ಚರಿಕೆ ನೀಡಿದ್ದು, ಯಾರಿಗೂ ಔಷಧಿ ನೀಡದಂತೆ ಸೂಚನೆ ಕೊಟ್ಟಿದ್ದಾರೆ.

ಸಂಡೂರು ತಾಲೂಕಿನ ಹಳೆ ದರೋಜಿ ಗ್ರಾಮದಲ್ಲಿ ಕೊರೊನಾಗೆ ಮಹಿಳೆಯೊಬ್ಬರು ನಾಟಿ ಔಷಧ ನೀಡುತ್ತಿದ್ದರು. ಈ ಔಷಧ ಪಡೆದರೆ ಕೊರೊನಾ ವಾಸಿಯಾಗುತ್ತೆ ಎಂದು ನಂಬಿರುವ ಹಲವರು ಔಷಧ ಪಡೆಯಲು ಮಹಿಳೆಯ ನಿವಾಸದ ಎದುರು ಆಗಮಿಸುತ್ತಿದ್ದರು.

ಮಹಿಳೆ ಮನೆಯಲ್ಲಿ ಔಷಧ ತಯಾರಿಸಿ ಜನರಿಗೆ ನೀಡುತ್ತಿದ್ದಾರೆ ಎಂಬ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಧವಿಸಿದ್ರು. ಸಂಡೂರು ತಹಶೀಲ್ದಾರ್ ರಶ್ಮಿ ಹಾಗೂ ತಾಲೂಕು ಆರೋಗ್ಯಧಿಕಾರಿ ಡಾ. ಕುಶಾಲ್ ರಾಜ್ ಬಂದು, ಸರ್ಕಾರದ ಅನುಮತಿ ಇಲ್ಲದೆ ಔಷಧ ನೀಡಬಾರದು ಎಂದು ಎಚ್ಚರಿಕೆ ನೀಡಿ, ಔಷಧ ನೀಡದಂತೆ ಮಹಿಳೆಯಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ