Breaking News

ಶಿಕ್ಷಕರ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ

Spread the love

ಯಾದಗಿರಿ: ನಗರದ ಆರ್‌ಟಿಒ ಕಚೇರಿ ಹಿಂಭಾಗದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆರಂಭಿಸಲಾದ ಶಿಕ್ಷಕರ ಕೋವಿಡ್ ಆರೈಕೆ ಕೇಂದ್ರಕ್ಕೆ ಲ್ಲಾ ಉಸ್ತುವಾರಿ ಸಚಿವ ಆರ್. ಶಂಕರ್‌ ಚಾಲನೆ ನೀಡಿದರು. ಕೋವಿಡ್‌ನಿಂದ ಮೃತಪಟ್ಟ 17 ಶಿಕ್ಷಕರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಲಾಯಿತು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ಅವರು ಮೃತ ಶಿಕ್ಷಕರ ನೆನಪಿಗಾಗಿ ಶಾಲಾ ಆವರಣದಲ್ಲಿ ಸಸಿ ನೆಟ್ಟರು.

ಶಾಸಕ ವೆಂಕಟರೆಡ್ಡಿ ಮುದ್ನಾಳ, ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿ ರಾಗಪ್ರಿಯಾ, ಜಿಪಂ ಸಿಇಒ ಶಿಲ್ಪಾ ಶರ್ಮಾ, ಎಸ್ಪಿ ಸಿ.ಬಿ.ವೇದಮೂರ್ತಿ, ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ, ಕಾರ್ಯದರ್ಶಿ ಜಗದೀಶ ಗೋಟ್ಲಾ, ಸಹ ಕಾರ್ಯದರ್ಶಿ ಮೂರ್ತಿ ಜಿ., ಮನೋಹರ ಕಟ್ಟಿಮನಿ, ಎನ್‌ಜಿಒ ಕಾರ್ಯದರ್ಶಿ ಶರಣಬಸವ ಗಚ್ಚಿನಮನಿ ಇದ್ದರು.


Spread the love

About Laxminews 24x7

Check Also

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು

Spread the loveಸನ್ಮಾನ್ಯ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ