ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಮಕ್ಕಳಲ್ಲಿಯೂ ಮಹಾಮಾರಿ ಕಾಡುತ್ತಿದೆ. ಬೆಳಗಾವಿಯಲ್ಲಿ ಬರೋಬ್ಬರಿ 46 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
18 ವರ್ಷದೊಳಗಿನ 46 ಮಕ್ಕಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಮೇ 18ರಂದು 20 ಮಕ್ಕಳಲ್ಲಿ ಪಾಸಿಟಿವ್ ಬಂದಿದ್ದು, ಇದೀಗ ಎರಡೇ ದಿನದಲ್ಲಿ 46 ಮಕ್ಕಳಿಗೆ ಸೋಂಕು ಹರಡಿರುವುದು ಆತಂಕಕ್ಕೀಡುಮಾಡಿದೆ.
ರಾಜ್ಯದಲ್ಲಿ ಚಿಕ್ಕ ಮಕ್ಕಳು ಕೂಡ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಕೊರೊನಾ 3ನೇ ಅಲೆ ಅಬ್ಬರ ಸದ್ದಿಲ್ಲದೇ ಶುರುವಾಗಿದೆಯೇ ಎಂಬ ಆತಂಕ ಎದುರಾಗಿದೆ.
Laxmi News 24×7