Breaking News
Home / ಹುಬ್ಬಳ್ಳಿ / ಹುಬ್ಬಳ್ಳಿ: ನಗರದ ವಿದ್ಯಾನಗರ ಸನ್ಮಾಶನದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗಾರದ ಭೂಮಿ ಪೂಜೆ

ಹುಬ್ಬಳ್ಳಿ: ನಗರದ ವಿದ್ಯಾನಗರ ಸನ್ಮಾಶನದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗಾರದ ಭೂಮಿ ಪೂಜೆ

Spread the love

ಹುಬ್ಬಳ್ಳಿ: ನಗರದ ವಿದ್ಯಾನಗರ ಸನ್ಮಾಶನದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗಾರದ ಭೂಮಿ ಪೂಜೆಯನ್ನು ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ನೆರವೇರಿಸಿದರು.

ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಕೆನರಾ ಬ್ಯಾಂಕ್‍ನ ಸಾಮಾಜಿಕ ಹೊಣೆಗಾರಿಕಾ ನಿಧಿಯಡಿ ವಿದ್ಯಾನಗರ ಸ್ಮಶಾನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ, 11 ಲಕ್ಷ ವೆಚ್ಚದ ಫ್ರೀಜರ್ ಬಾಕ್ಸ್‍ಗಳನ್ನು ಒದಗಿಸಲಾಗುತ್ತಿದೆ. ಕಾಮಗಾರಿಯನ್ನು ಧಾರವಾಡದ ನಿರ್ಮಿತಿ ಅನುಷ್ಠಾನಗೊಳಿಸುತ್ತಿದೆ. ಆಗಸ್ಪ್ 31ರ ಒಳಗಾಗಿ ನಿರ್ಮಾಣಕ್ಕೆ ಗಡುವು ನೀಡಲಾಗಿದೆ ಎಂದರು.

ನಗರದ ಮಂಟೂರು ಹರಿಶ್ಚಂದ್ರ ಸನ್ಮಾಶನದಲ್ಲಿ ಸ್ಮಾರ್ಟ್ ಸಿಟಿ ಅನುದಾನ ಅಡಿ 2.60 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗರದ ಕಾಮಗಾರಿ ಪ್ರಗತಿಯಲ್ಲಿದೆ. ಹೆಗ್ಗೇರಿ ಸ್ಮಶಾನದಲ್ಲಿ 1.20 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಶೀಘ್ರವಾಗಿ ಕಾಮಗಾರಿ ಆರಂಭಿಸಲಾಗುತ್ತಿದೆ. ಅಲ್ಲದೆ ಆನಂದ ನಗರ ಸನ್ಮಾಶನದಲ್ಲಿ 74 ಲಕ್ಷ ವೆಚ್ಚದಲ್ಲಿ ಗ್ಯಾಸ್ ಆಧಾರಿತ ಚಿತಾಗರ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಧಾರವಾಡ ಹೊಸ ಯಲ್ಲಾಪುರ ಸ್ಮಶಾನದಲ್ಲಿ 4.40 ಲಕ್ಷ ವೆಚ್ಚದಲ್ಲಿ ಗ್ಯಾಸ್ ಕ್ರಿಮೇಷನ್ ಚೆಂಬರ್ ಅಳವಡಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ