ಮೈಸೂರು : ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ತಂದೆ ಸೈಕಲ್ ತುಳಿದಿರುವ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ.
ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಒಮ್ಮೆ ಮಾತ್ರೆ ತಪ್ಪಿದರೆ 18 ವರ್ಷ ಮತ್ತೆ ಮಾತ್ರೆ ನೀಡಬೇಕಾಗುತ್ತದೆ ಎಂಬ ಆತಂಕದಲ್ಲಿ ಸೈಕಲ್?ನಲ್ಲಿ ನೂರಾರು ಕಿಲೋಮೀಟರ್ ಹೋಗಿ ಔಷಧಿ ತಂದಿದ್ದಾರೆ.
ಬೈಕ್, ಆಟೋ ಹಾಗೂ ವಾಹನ ಸೌಲಭ್ಯ ಸಿಗದ ಹಿನ್ನೆಲೆ ತಂದೆ ತನ್ನ ಸೈಕಲ್ ತುಳಿದು ಮಗನಿಗೆ ಮಾತ್ರೆ ತಂದುಕೊಟ್ಟಿದ್ದಾರೆ.
ಕಳೆದ ಭಾನುವಾರ ಗ್ರಾಮದಿಂದ ತೆರಳಿ ಕನಕಪುರದಲ್ಲಿ ತಂಗಿದ್ದರು. ನಂತರ ಅಲ್ಲಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ತಂದಿದ್ದಾರೆ.
Laxmi News 24×7