Breaking News

ಕೊರೊನಾ ಸೋಂಕಿತರಿಗಾಗಿ 110 ವೆಂಟಿಲೆಟರ್ :ಕಾಂಗ್ರೆಸ್ ನಗರ ಅಧ್ಯಕ್ಷ ರಾಜು ಸೇಠ

Spread the love

ಬೆಳಗಾವಿ: ಕೊರೊನಾ ಸೋಂಕಿತರ ಆಕ್ಸಿಜನ್ ಕೊರತೆಯಿಂದ ಸಾವೀಗಿಡಾಗುತ್ತಿರುವುದರಿಂದ ಕಾಂಗ್ರೆಸ್ ನಗರ ಅಧ್ಯಕ್ಷ ರಾಜು ಸೇಠ 110 ಆಕ್ಸಿಜನ್ ಸಿಲಿಂಡರ್ ಗಳ ವ್ಯವಸ್ಥೆ ಮಾಡಿದ್ದು, ಜನರ ಮೆಚ್ಚುಗೆ ವ್ಯಕ್ತ ವಾಗುತ್ತಿದೆ.

ನಗರದಲ್ಲಿ ಕೊರೊನಾ ಸೋಂಕಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿ.ಪಿ., ಶುಗರ್ ಕಾಯಿಲೆಯಿಂದ ಬಳಲುತ್ತಿರುವ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಮೃತಪಡುತ್ತಿದ್ದು, ಇದರಿಂದ ಸಮಸ್ಯೆ ಅರಿತ  ರಾಜು ಸೇಠ ವಿಶೇಷವಾದ ಸೌಲಭ್ಯವನ್ನು ಒದಗಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇಲ್ಲಿನ ಅಂಜುಮನ್ ಹಾಲ್ ನಲ್ಲಿ 110 ಆಕ್ಸಿಜನ್ ಸಿಲಿಂಡರ್ ಗಳ ವ್ಯವಸ್ಥೆ ಮಾಡಿರುವ ಅವರು ವೈದ್ಯಕೀಯ ತಂಡದೊಂದಿಗೆ ಜನರ ಮನೆ ಬಾಗಿಲಿಗೆ ಸೇವೆ ಒದಗಿಸಲು ಮುಂದಾಗಿದ್ದಾರೆ.

ಅಂಜುಮನ್- ಎ-ಇಸ್ಲಾಂ ಸಂಸ್ಥೆಯ ಯುವಕರ ತಂಡವೊಂದನ್ನು ರಚಿಸಿ, ಅವರಿಗೆ ವೈದ್ಯರಿಂದ ಟ್ರೇನಿಂಗ್ ಕೊಟ್ಟು ಆಕ್ಸಿಜನ್ ಸಿಲಿಂಡರ್ ನ್ನು ರೋಗಿಗೆ ಯಾವ ರೀತಿ ಅಳವಡಿಸಬೇಕು ಎನ್ನುವ ಎಲ್ಲ ರೀತಿಯ ತರಬೇತಿ ನೀಡಿ ಯುವಕರ ಪಡೆಯನ್ನು ನಿಯೋಜಿಸಿದ್ದಾರೆ. ಉಸಿರಾಟದ ತೊಂದರೆ ಇದ್ದವರು ಬೆಳಗಾವಿಯ ಅಂಜುಮನ್ ಸಂಸ್ಥೆಯನ್ನು ಸಂಪರ್ಕ ಮಾಡಿದ್ರೆ ಸಾಕು ಮನೆ ಬಾಗಿಲಿಗೆ ಆಕ್ಸಿಜನ್ ಬರುತ್ತದೆ ರಾಜು ಸೇಠ್ ತಿಳಿಸಿದರು.


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ