Home / ರಾಜಕೀಯ / ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಅಭ್ಯರ್ಥಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಅಭ್ಯರ್ಥಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಭಾಗಿಯಾಗಿರುವ ಅಶ್ಲೀಲ ಸಿಡಿ ಪ್ರಕರಣದ ಶಂಕಿತ ಆರೋಪಿಗಳು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್​ ಜೂನ್ 2ಕ್ಕೆ ಮುಂದೂಡಿದೆ. ಈ ಸಂಬಂಧ ಸಿಟಿ ಸಿವಿಲ್ ಕೋರ್ಟ್​ನ 91ನೇ ಕೋರ್ಟ್​ ಆದೇಶ ನೀಡಿದೆ. ಬ್ಲಾಕ್​ಮೇಲ್ ಸಂಬಂಧ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಕಬ್ಬನ್​ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆರೋಪಿಗಳಾದ ನರೇಶ್​ ಗೌಡ ಮತ್ತು ಶ್ರವಣ್ ಈ ಸಂಬಂಧ​ ನ್ಯಾಯಾಲಯದ ಮೆಟ್ಟಿಲೇರಿದ್ದರು. ಸಿಟಿ ಸಿವಿಲ್ ಕೋರ್ಟ್​ನ ಮೇ 24ರಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಸದಾಶಿವನಗರ ಠಾಣೆ ಪೊಲೀಸರಿಗೆ ನೊಟೀಸ್ ನೀಡಿದ್ದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ 29ರಂದು ನಡೆಸುವುದಾಗಿ ಹೇಳಿತ್ತು. ಸಿಡಿ ಪ್ರಕರಣದಲ್ಲಿ ನನ್ನ ವಿರುದ್ಧ ಷಡ್ಯಂತ್ರ ಎಸಗಲಾಗಿದೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಆಪಾದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳಾದ ನರೇಶ್ ಮತ್ತು ಶ್ರವಣ್‌ ಅವರುಗಳು ತಲೆಮರಿಸಿಕೊಂಡಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಇವರಿಬ್ಬರಿಗಾಗಿ ಹುಡುಕಾಟ ನಡೆಸುತ್ತಿತ್ತು.

ಆರೋಪಿಗಳಾದ ನರೇಶ್, ಶ್ರವಣ್​ಗೆ ಜಾಮೀನು ನೀಡಬಾರದು ಎಂದು ಎಸ್​ಐಟಿ ಹೈಕೋರ್ಟ್​ಗೆ ಮನವಿ ಸಲ್ಲಿಸಿತ್ತು. ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಆರೋಪಿಗಳಾದ ನರೇಶ್ ಮತ್ತು ಶ್ರವಣ್ ಪಾತ್ರದ ಬಗ್ಗೆ ಹಲವು ಅನುಮಾನಗಳಿವೆ. ಇವರು ಹನಿಟ್ರ್ಯಾಪ್ ಸಂಚಿನ ಭಾಗವಾಗಿರುವ ಬಗ್ಗೆ ಹಲವು ದಾಖಲೆಗಳು ಸಿಕ್ಕಿವೆ. ಸಿಸಿಟಿವಿ ದೃಶ್ಯಗಳು ಹಾಗೂ ದಾಖಲಾತಿಗಳ ಸಹಿತ ಎಸ್​ಐಟಿ ಕೋರ್ಟ್​ಗೆ ಮನವಿ ಸಲ್ಲಿಸಿದೆ.

ಎಸ್​ಪಿ ರೋಡಿನಲ್ಲಿ ದುಬಾರಿ ಕ್ಯಾಮರಾ ಖರೀದಿ ಪೊಲೀಸರ ಕೈಗೆ ಸಿಗದೆ, ಈವರೆಗೂ ಎಲ್ಲೆಲ್ಲಿ ತಿರುಗಿದ್ದಾರೆ ಎಂಬ ಮಾಹಿತಿಯನ್ನೂ ಪೊಲೀಸರು ನ್ಯಾಯಾಲಯಕ್ಕೆ ನೀಡಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ