Breaking News

ಸದ್ದಿಲ್ಲದ ಹಸೆಮಣೆ ಏರಿದ ಜನಪ್ರಿಯ ನಟಿ ಪ್ರಣಿತಾ ಸುಭಾಷ್

Spread the love

ಬೆಂಗಳೂರು :ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಪ್ರಣಿತಾ ಸುಭಾಷ್ ಲಾಕ್ ಡೌನ್ ಸಮಯದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಲಾಕ್‌ಡೌನ್‌ನಲ್ಲಿ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದಲೇ ಹರಿದಾಡುತ್ತಿತ್ತು . ಆದರೆ ಆ ಬಗ್ಗೆ ಪ್ರಣಿತಾ ಅವರು ಬಹಿರಂಗವಾಗಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ . ಈಗ ಪ್ರಣಿತಾ ಮದುವೆಯ ಫೋಟೋಗಳ ಬಹಿರಂಗ ಆಗಿವೆ . ಆ ಮೂಲಕ ಅವರು ಸಪ್ತಪದಿ ತುಳಿದಿರುವುದಕ್ಕೆ ಸೂಕ್ತ ಸಾಕ್ಷಿ ಸಿಕ್ಕಂತಾಗಿದೆ .

ಮೊನ್ನೆಯಷ್ಟೇ ಸದ್ದಿಲ್ಲದೇ ನಟಿ ಕವಿತಾ ಗೌಡ ಹಾಗೂ ಚಂದನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು . ಇದೀಗ

ಪ್ರಣಿತಾ ಅವರು ಸೈಲೆಂಟ್ ಆಗಿ ಹಸೆಮಣೆ ಏರಿದ್ದಾರೆ ಎಂದು ವರದಿಗಳು ತಿಳಿಸಿವೆ.

2010 ರಲ್ಲಿ ಪೊರ್ಕಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರಣಿತಾ ಪದಾರ್ಪಣೆ ಮಾಡಿದರು . ಮೊದಲ ಸಿನಿಮಾದಲ್ಲಿಯೇ ಅವರಿಗೆ ದರ್ಶನ್ ಜೊತೆ ನಟಿಸುವ ಅವಕಾಶ ಸಿಕ್ಕಿತ್ತು . ಬಳಿಕ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ