Breaking News
Home / ಜಿಲ್ಲೆ / ಬೆಂಗಳೂರು / ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನಿರಾಕರಿಸಿದೆ.ಮನೆಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಿ ಹಬ್ಬ ಆಚರಿಸಬಹುದು.

ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನಿರಾಕರಿಸಿದೆ.ಮನೆಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಿ ಹಬ್ಬ ಆಚರಿಸಬಹುದು.

Spread the love

ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನಿರಾಕರಿಸಿದೆ.

ಒಂದು ವೇಳೆ ಆದೇಶ ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವವರ ವಿರುದ್ಧವೂ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ಮಂಜುನಾಥ್ ಪ್ರಸಾದ್ ಎಚ್ಚರಿಸಿದ್ದಾರೆ.

ಸಾರ್ವಜನಿಕರು ಮನೆಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಿ ಹಬ್ಬ ಆಚರಿಸಬಹುದು. ಪರಿಸರ ಸ್ನೇಹಿ ಗಣಪನಿಗೆ ಮಾತ್ರ ಅವಕಾಶ. ಬಿಬಿಎಂಪಿ ಕೆರೆಗಳು, ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

# ಸಾಮಾನ್ಯ ಸ್ವಾತಂತ್ರ್ಯೋತ್ಸವ:
ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಾಮಾನ್ಯ ಸ್ವಾತಂತ್ರ್ಯೋತ್ಸವವನ್ನಾಗಿ ಆಚರಿಸಲಾಗುತ್ತಿದೆ ಎಂದು ಮಂಜುನಾಥ್ ಪ್ರಸಾದ್ ತಿಳಿಸಿದರು.

ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿ ಯಾವುದೇ ಸಾಂಸ್ಕøತಿಕ ಕಾರ್ಯಕ್ರಮ ಇರುವುದಿಲ್ಲ. 9 ಗಂಟೆಗೆ ಮುಖ್ಯಮಂತ್ರಿಗಳು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅನುಮತಿ ಇರುವುದಿಲ್ಲ. 25 ಮಂದಿ ಕೊರೊನಾ ವಾರಿಯರ್ಸ್, 25 ಮಂದಿ ಸೋಂಕಿನಿಂದ ಮುಕ್ತರಾದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಧ್ವಜಾರೋಹಣದ ವೇಳೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡುವುದಿಲ್ಲ ಹಾಗೂ ಗೌರವ ರಕ್ಷಣೆ ಮತ್ತು ಪಥ ಸಂಚಲನವನ್ನು ರದ್ದುಪಡಿಸಲಾಗಿದೆ.

ಸಾಮಾಜಿಕ ಅಂತರ ಕಾಪಾಡಿಕೊಂಡು ಪೊಲೀಸರು ಗಾಡ್ ಆಫ್ ಹಾನರ್ ಸಲ್ಲಿಸಲಿದ್ದಾರೆ. ಒಟ್ಟಾರೆ 200 ಜನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ರಾಷ್ಟ್ರಗೀತೆ ಮತ್ತು ಎರಡು ಭಕ್ತಿಗೀತೆಗಳ ಕಾರ್ಯಕ್ರಮ ಮಾತ್ರ ಇರಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ