ಬೆಂಗಳೂರು: ಕೋವಿಡ್ ಸಂಕಷ್ಟ ಸಮಯದಲ್ಲಿ ನರ್ಸ್ಗಳು ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರನ್ನು ಯಾವ ಶಬ್ಧದಿಂದ ಅಭಿನಂದಿಸಿದರೂ ಕಡಿಮೆಯೇ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನರ್ಸ್‌ಗಳ ಜತೆ ಮಾತುಕತೆ ನಡೆಸಿದ್ದೇನೆ. ಅವರು ತಮ್ಮ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಅವುಗಳನ್ನು ಪರಿಹರಿಸುತ್ತೇವೆ. ಕೆಲವು ಸಲಹೆಗಳನ್ನೂ ಕೊಟ್ಟಿದ್ದಾರೆ. ಅವುಗಳನ್ನು ಪರಿಗಣಿಸುತ್ತೇವೆ ಎಂದು ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಲಾಕ್ ಡೌನ್ ಕುರಿತು ಜೂನ್ ಮೇ 4 ಅಥವಾ 5ರ ಬಳಿಕ ಚರ್ಚೆ ಮಾಡುತ್ತೇನೆ. ಬ್ಲ್ಯಾಕ್ ಫಂಗಸ್ ಹೆಚ್ಚಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ತಿಳಿಸಿದರು.
Laxmi News 24×7