Breaking News

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ಬಂದರು, ಹಲವು ಕಾರ್ಖಾನೆ, ಸಂಸ್ಥೆಗಳನ್ನ ಮಾರಾಟ ಮಾಡಿದ್ದಾರೆ.: ಸಿದ್ದರಾಮಯ್ಯ

Spread the love

ಬೆಂಗಳೂರು: ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ಬಂದರು, ಹಲವು ಕಾರ್ಖಾನೆ, ಸಂಸ್ಥೆಗಳನ್ನ ಮಾರಾಟ ಮಾಡಿದ್ದಾರೆ. ಮೋದಿ ಅಭಿವೃದ್ಧಿ ಕಾರ್ಯಗಳಿಂದ ದೇಶ ಹಿಂದಕ್ಕೆ ಹೋಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 7 ವರ್ಷಗಳಾದ ಹಿನ್ನೆಲೆಯಲ್ಲಿ ಪ್ರತಿಕ್ರಿಸಿದ ವಿಪಕ್ಷ ನಾಯಕ, ‘ಕಳೆದ ನಾಲ್ಕು ಐದು ದಿನಗಳಿಂದ ಮಾಧ್ಯಮಗಳ ವರದಿಯನ್ನ ನೋಡುತ್ತಿದ್ದೇನೆ. ಮೋದಿ ಸರ್ಕಾರ ಬಂದು 7 ವರ್ಷವಾದ ಹಿನ್ನೆಲೆಯಲ್ಲಿ ಸಂಭ್ರಮಿಸುತ್ತಿದ್ದಾರೆ. ಬಿಜೆಪಿಯವ್ರು ಖಾಲಿ ಕೊಡ ಹೊತ್ತು ಸಂಭ್ರಮಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ರು.

ಇನ್ನು ಮೋದಿ ಸರ್ಕಾರಕ್ಕೆ ಜನ ಶಾಪ ಹಾಕ್ತಿದ್ದಾರೆ. ಅನಾಹುತಗಳನ್ನ ಮಾಡಿದ್ದೇ ಮೋದಿ ಸರ್ಕಾರದ ಸಾಧನೆಯಾಗಿದೆ. ಮೋದಿ ಅಧಿಕಾರಕ್ಕೆ ಬಂದ ನಂತ್ರ ಕೆಟ್ಟ ಕಾನೂನುಗಳನ್ನ ಜಾರಿ ಮಾಡಿದ್ದು, ಬಂದರು ಕಾರ್ಖಾನೆ, ಸಂಸ್ಥೆಗಳನ್ನ ಮಾರಾಟ ಮಾಡಿದ್ದಾರೆ. ಮೋದಿ ಅಭಿವೃದ್ಧಿ ಕಾರ್ಯಗಳಿಂದ ದೇಶ ಹಿಂದಕ್ಕೆ ಹೋಗಿದೆ ಎಂದು ಲೇವಡಿ ಮಾಡಿದರು.

 


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ