Breaking News

ಬೆಳಗಾವಿ ಖಾಸಗಿ ಆಸ್ಪತ್ರೆಗಳಲ್ಲಿ COVID19 ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು: ಗೋವಿಂದ ಕಾರಜೋಳ

Spread the love

ಬೆಳಗಾವಿ: ಬಿಮ್ಸ್ ನಲ್ಲಿ ಕೋವಿಡ್ ಸಂಬಂಧಿಸಿದ ಬೆಡ್ ಗಳು ಭರ್ತಿಯಾಗಿದ್ದರೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿಸಲ್ಪಟ್ಟಿರುವ ಖಾಸಗಿ ಆಸ್ಪತ್ರೆಗೆ ಕಳುಹಿಸಬೇಕು.
ಇಂತಹ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಿರಿಯ ಅಧಿಕಾರಿಗಳ ಜತೆ ನಡೆದ ಆನ್ ಲೈನ್ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಆಕ್ಸಿಜನ್, ಔಷಧಿ ಸೇರಿದಂತೆ ಎಲ್ಲ ಅಗತ್ಯ ವ್ಯವಸ್ಥೆಯನ್ನು ಸರಕಾರದಿಂದ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಸೋಂಕಿತರ ಚಿಕಿತ್ಸೆ ಹಾಗೂ ಆರೈಕೆಯಲ್ಲಿ ಸಮಸ್ಯೆಯಾಗಬಾರದು ಎಂದು ಕಾರಜೋಳ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕರ್ತವ್ಯ ನಿರ್ಲಕ್ಷ್ಯ ತೋರಿದರೆ ನಿರ್ಧಾಕ್ಷಿಣ್ಯ ಕ್ರಮ:

ಬಿಮ್ಸ್ ಬಗ್ಗೆ ಅನೇಕ ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳಬೇಕು. ಕರ್ತವ್ಯ ನಿರ್ಲಕ್ಷ್ಯ ತೋರುವ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಯನ್ನು ಮುಲಾಜಿಲ್ಲದೇ ಸೇವೆಯಿಂದ ಬಿಡುಗಡೆಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಬಿಮ್ಸ್ ನಿರ್ದೇಶಕರಿಗೆ ಹೇಳಿದರು.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

Spread the love ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ