Breaking News

5 ಜಿ ನೆಟ್ವರ್ಕ್ ಸ್ಥಾಪನೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಟಿ ಜುಹಿ ಚಾವ್ಲಾ

Spread the love

ನವದೆಹಲಿ : ಈಗಾಗಲೇ ದೇಶದ ಎಲ್ಲೆಡೆ 4 ಜಿ ವೈರ್ಲೆಸ್ ನೆಟ್ವರ್ಕ್ ಪ್ರಚಲಿತದಲ್ಲಿದೆ. ಆದರೆ ಇದನ್ನು ಇನ್ನೂ ಉತ್ತಮಗೊಳಿಸುವ ಹಿನ್ನೆಲೆಯಲ್ಲಿ 5ಜಿ ನೆಟ್ವರ್ಕ್ ಗಳನ್ನು ತರುವ ಸಂಶೋಧನೆಗಳು ಹಾಗೂ ಪ್ರಯೋಗಗಳು ನಡೆಯುತ್ತವೆ.

5 ಜಿ ವೈರ್‌ಲೆಸ್ ನೆಟ್‌ವರ್ಕ್‌ಗಳನ್ನು ಸ್ಥಾಪನೆ ಮಾಡುವುದರ ವಿರುದ್ಧ ಅನೇಕ ಪರಿಸರವಾದಿಗಳು ಧ್ವನಿ ಎತ್ತಿದ್ದರು ಮತ್ತು ಇದನ್ನು ವಿರೋಧಿಸಿದ್ದರು. ಇದೀಗ ಇದರ ವಿರುದ್ಧ ಬಾಲಿವುಡ್ ಖ್ಯಾತ ನಟಿ ಪರಿಸರವಾದಿ ಜುಹಿ ಚಾವ್ಲಾ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

5 ಜಿ ಯೋಜನೆ ಮಾನವರ ಮೇಲೆ ಬದಲಾಯಿಸಲಾಗದ ಪರಿಣಾಮ ಬೀರುತ್ತದೆ . ಭೂಮಿ ಮೇಲಿನ ಎಲ್ಲಾ ಪರಿಸರ ವ್ಯವಸ್ಥೆಗಳಿಗೆ ಶಾಶ್ವತ ಹಾನಿಯನ್ನುಂಟುಮಾಡುವ ಅಪಾಯವಿದೆ . ಪ್ರಾಣಿ , ಪಕ್ಷಿ , ಕೀಟ ಮತ್ತು ಭೂಮಿಯ ಮೇಲಿನ ಯಾವುದೇ ಸಸ್ಯಗಳು ಈ ವಿಕಿರಣಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಲು ಸಾಧ್ಯವಾಗುವುದಿಲ್ಲ ಎಂದು ಜೂಹಿ ಚಾವ್ವಾ ಹೇಳಿದ್ದಾರೆ.

ಅರ್ಜಿ ಸ್ವೀಕರಿಸಿದ ನ್ಯಾಯಮೂರ್ತಿ ಸಿ ಹರಿ ಶಂಕರ್ ಜೂನ್ 2 ರಂದು ವಿಚಾರಣೆಗೆ ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಿದ್ದಾರೆ .


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ