Breaking News

ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ನಡುವೆ ಶವವಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ 7 ನರ್ಸ್ ಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾ ಸರ್ಜನ್ ಆದೇಶ

Spread the love

ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ನಡುವೆ ಶವವಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ 7 ನರ್ಸ್ ಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾ ಸರ್ಜನ್ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಜಿಲ್ಲಾ ಸರ್ಜನ್ ಡಾ.ಹುಸೇನ್ ಸಾಬ್ 7 ನರ್ಸ್ ಗಳ ವಿರುದ್ಧ ಕ್ರಮ ಕೈಗೊಂಡು, ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ. ತಮ್ಮ ವಿರುದ್ಧದ ಕ್ರಮಕ್ಕೆ ಕಣ್ಣೀರಿಟ್ಟ ನರ್ಸ್ ಗಳು ರಿಲಿವಿಂಗ್ ಆದೇಶ ಹಿಂಪಡೆಯಬೇಕು ಇಲ್ಲವಾದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಆಸ್ಪತ್ರೆಯಲ್ಲಿ ಶವ ಸಾಗಿಸಲು 1 ಆಂಬುಲೆನ್ಸ್ ಮಾತ್ರ ಇದೆ. ಅಲ್ಲದೇ ಸಂಬಂಧಪಟ್ಟ ವೈದ್ಯರಿಲ್ಲದೇ ಶವ ಶಿಫ್ಟ್ ಮಾಡಲು ಕೂದ ವಸ್ತುಗಳನ್ನು ಕೊಟ್ಟಿಲ್ಲ. ಸೂಕ್ತ ವ್ಯವಸ್ಥೆ ಇಲ್ಲದೇ ಶವ ಸಾಗಿಸಿಲ್ಲ. ಅವ್ಯಸ್ಥೆ ಸರಿಪಡಿಸದೇ ಜಿಲ್ಲಾ ಸರ್ಜನ್ ನಮ್ಮ ವಿರುದ್ಧ ಕ್ರಮಕೈಗೊಂಡಿದ್ದಾರೆ. ರಿಲಿವಿಂಗ್ ಲೆಟರ್ ವಾಪಸ್ ಪಡೆಯದಿದ್ದರೆ ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಸುವರ್ಣಸೌಧದ ಮುಂದೆ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರಧ್ವಜ ಅನಾವರಣ

Spread the loveಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ