Breaking News
Home / ರಾಜಕೀಯ / ಸೊಂಕಿತರೊಂದಿಗೆ ವೈದ್ಯೆ ಡ್ಯಾನ್ಸ್ – ಜನರಿಂದ ಮೆಚ್ಚುಗೆ

ಸೊಂಕಿತರೊಂದಿಗೆ ವೈದ್ಯೆ ಡ್ಯಾನ್ಸ್ – ಜನರಿಂದ ಮೆಚ್ಚುಗೆ

Spread the love

ಚಿತ್ರದುರ್ಗ: ಆತ್ಮಸ್ಥೈರ್ಯ ತುಂಬಲು ಜಿಲ್ಲೆಯ ವೈದ್ಯರು ಸೋಂಕಿತರ ಜೊತೆ ನೃತ್ಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಕೋವಿಡ್ ಕೇರ್ ಕೇಂದ್ರದಲ್ಲಿ ಕಳೆದ ಹತ್ತು ದಿನಗಳಿಂದ ಕೊರೊನಾ ಸೋಂಕಿತರಿಗೆ ವೈದ್ಯೆ ಶೃತಿ ನೃತ್ಯ ವ್ಯಾಯಾಮ ಮಾಡಿಸುತ್ತಿದ್ದಾರೆ.

ಪ್ರತಿ ದಿನ ಹಿಂದಿ ಹಾಡೋಂದಕ್ಕೆ ನೃತ್ಯ ಮಾಡಿಸುವ ವೈದ್ಯೆ ಶೃತಿ, ನಾಗಿನಿ ನಾಗಿನಿ ಹಾಡಿಗೆ ಕೊರೊನಾ ಸೋಂಕಿತರೊಟ್ಟಿಗೆ ಹೆಜ್ಜೆ ಹಾಕಿಸುವ ಮೂಲಕ ಗಮನ ಸೆಳೆದಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದೆ ಎಂದು ಬಾರಿ ಆತಂಕ ಹಾಗೂ ಭಯದಿಂದ ಬದುಕುವ ಸೋಂಕಿತರಿಗೆ ಮಾನಸಿಕವಾಗಿ ಆತ್ಮಸ್ಥೈರ್ಯ ತುಂಬಲು ಡ್ಯಾನ್ಸ್ ಪ್ರಯೋಗ ಮಾಡಿದ್ದಾರೆ. ವೈದ್ಯರು ಸಹ ಎಲ್ಲರೊಟ್ಟಿಗೆ ಒಂದಾಗಿ ನಯ, ನಾಜುಕಿಲ್ಲದೇ ಸ್ವಲ್ಪವೂ ಮುಜುಗರ ಪಡದೇ ಸ್ಟೆಪ್ ಹಾಕಿ ಸೋಂಕಿತರನ್ನು ಸಂಪೂರ್ಣ ಆಕ್ಟೀವ್ ಆಗಿರುವಂತೆ ಮಾಡಿದ್ದಾರೆ.

ಸದ್ಯ ವೈದ್ಯರು ಮಾಡಿರುವ ಈ ಐಡಿಯಾ ಫುಲ್ ವರ್ಕೌಟ್ ಆಗಿದ್ದು, ಅತೀ ಬೇಗನೇ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳುವಂತಾಗಿದೆ. ಹೀಗಾಗಿ ಡಾಕ್ಟರ್ ಶೃತಿಯವರ ಕಾರ್ಯಕ್ಕೆ ಎಲ್ಲೆಡೆ ಸೋಂಕಿತರು ಹಾಗೂ ಅವರ ಕುಟುಂಬಸ್ಥರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.


Spread the love

About Laxminews 24x7

Check Also

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Spread the love ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ