Breaking News

ಸೋಂಕಿತ ಮಹಿಳೆಯ ಮೇಲೆ ಆಸ್ಪತ್ರೆಯಲ್ಲೇ ಲೈಂಗಿಕ ಕಿರುಕುಳ ; ವಾರ್ಡ್‌ ಬಾಯ್‌ ಬಂಧನ

Spread the love

ಹುಬ್ಬಳ್ಳಿ: ಇಲ್ಲಿನ ಬಾಲಾಜಿ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೊಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶ್ವಸಿಯಾಗಿದ್ದಾರೆ.ಬಂಧಿತನನ್ನು ಅಶೋಕ್ ಹಲಗಿ ಎಂದು ಗುರುತಿಸಲಾಗಿದೆ. ಕಳೆದ 23ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಾಲಾಜಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್ ಸೊಂಕಿತ ಮಹಿಳೆಯ ಮೇಲೆ ವಾರ್ಡಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ. ಸೋಂಕಿತ ಮಹಿಳೆ ಪುತ್ರನಿಗೆ ಈ ಕುರಿತು ಮಾಹಿತಿ ನೀಡಿದ್ದಳು.

ಘಟನೆ ಬೆಳಕಿಗೆ ಬಂದ ನಂತರ ಸೊಂಕಿತ ಮಹಿಳೆಯ ಪರವಾಗಿ ಪುತ್ರ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾದ ನಂತರ ಕೃತ್ಯವನ್ನ ಆಸ್ಪತ್ರೆಯ ಆಡಳಿತ ಮಂಡಳಿ ಅಲ್ಲಗೆಳೆದಿದ್ದರು. ಅಲ್ಲದೇ ದೂರುದಾರನ ವಿರುದ್ಧ ಸುಳ್ಳು ಆರೋಪ ಮಾಡಿದ್ರು. ಈ ಘಟನೆಯ ಬಗ್ಗೆ ವಿಸ್ತೃತವಾಗಿ ತನಿಖೆ ನಡೆಸಿದ ವಿದ್ಯಾನಗರ ಪೋಲೀಸರು ಸೊಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಾರ್ಡ್ ಬಾಯ್ ಅಶೋಕ ಹಲಗಿಯನ್ನ ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ವಾರ್ಡಬಾಯ್ ಅಶೋಕ್ ಹಲಗಿ ಕೃತ್ಯ ಎಸಗಿದ ನಂತರ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಅಲ್ಲದೇ ಆಸ್ಪತ್ರೆಯಿಂದ ಪರಾರಿಯಾಗಿ ಅಪಘಾತದಲ್ಲಿ ಗಾಯಗೊಂಡಿದ್ದ. ಆರೋಪಿಯ ಚಲನವಲನ ಪತ್ತೆ ಮಾಡಿದ ಪೊಲೀಸರು ಆರೋಪಿಯನ್ನ ಬಂಧಿಸಿ ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನೆಯ ಕುರಿತು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ