ಬೆಂಗಳೂರು, ಜೂ. 1- ರಾಜ್ಯದಲ್ಲಿ ಏಕ ಕಾಲಕ್ಕೆ ಅನ್ ಲಾಕ್ ಬೇಡ. ಹಂತ ಹಂತವಾಗಿ ಅನ್ ಲಾಕ್ ಮಾಡಿದರೆ ಸೂಕ್ತ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದರು. ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆಶ್ರಯದಲ್ಲಿ ಇಂದು ಸಾರಿಗೆ ಸಿಬ್ಬಂದಿಗಳಿಗೆ ಎರಡನೆಯ ಹಂತದಲ್ಲಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಆಂದೋಲನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಲಾಕ್ ಡೌನ್ ಮಾಡಿದ್ದರಿಂದ ರಾಜ್ಯದಲ್ಲಿ ಕೋವಿಡ್ ಪಾಸಿಟೀವ್ ಪ್ರಮಾಣ ಕಡಿಮೆಯಾಗಿದೆ. ಅನ್ ಲಾಕ್ ಬಗ್ಗೆ ತಜ್ಞರ ಜತೆ ನಾಳೆ ಸಮಾಲೋಚನೆ ಮಾಡಲಾಗುವುದು. ಆ ನಂತರ ಅಂತಿಮ ತೀರ್ಮಾನ ವಾಗಲಿದೆ ಎಂದು ಅವರು ಹೇಳಿದರು. ತಜ್ಞರ ಅಭಿಪ್ರಾಯ ಪಡೆದ ಬಳಿಕ ಲಾಕ್ ಡೌನ್ ಮುಂದುವರೆಸಬೇಕೆ ಅಥವಾ ಅನ್ ಲಾಕ್ ಮಾಡಬೇಕೆ ಎಂಬ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಜೂನ್ 7 ರೊಳಗೆ ಸೋಂಕಿನ ಪ್ರಮಾಣ ರಾಜ್ಯದಲ್ಲಿ 5ಸಾವಿರದ ಒಳಗೆ ಬಂದರೆ ಮಾತ್ರ ಅನ್ ಲಾಕ್ ಮಾಡಬಹುದು. ಸೋಂಕು ಕಡಿಮೆ ಆಗಲಿಲ್ಲವಾದರೆ ಅನ್ ಲಾಕ್ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
Laxmi News 24×7