ವಿಜಯಪುರ: ರಾಜ್ಯದಲ್ಲಿರುವುದು ಸಿಎಂ ಬಿ.ಎಸ್.ಯಡಿಯೂರಪ್ಪನವರ ಸರ್ಕಾರವಲ್ಲ, ಬಿ.ವೈ.ವಿಜಯೇಂದ್ರ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕೆಂಡಕಾರಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪನವರು ದೆಹಲಿಗೆ ಹೋಗಬೇಕಿತ್ತು. ಆದರೆ ಅವರ ಪುತ್ರ ಬಿ.ವೈ.ವಿಜಯೇಂದ್ರ ದೆಹಲಿಗೆ ಹೋಗಿ ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ. ರಾಜ್ಯದಲ್ಲಿರುವುದು ಬಿಎಸ್ ವೈ ಸರ್ಕಾರವಲ್ಲ, ವಿಜಯೇಂದ್ರ ಸರ್ಕಾರ ಎಂಬುದು ಇದರಿಂದಲೇ ಸಾಬೀತಾಗುತ್ತದೆ ಎಂದರು.
ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ವಜಾ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಶಕ್ತಿ ಯಡಿಯೂರಪ್ಪನವರಿಗಿಲ್ಲ. ಹಾಗೆ ಮಾಡಿದರೆ ಒಂದೇ ಗಂಟೆಯಲ್ಲಿ ರಾಜೀನಾಮೆ ಕೊಡಬೇಕಾಗುತ್ತದೆ. ರಮೇಶ್ ಜಾರಕಿಹೊಳಿ ಪ್ರಕರಣದಂತೆಯೇ ಇದೂ ಕೂಡ ಆಗುತ್ತದೆ ಎಂದು ವ್ಯಂಗ್ಯವಾಡಿದರು.
Laxmi News 24×7