Breaking News

ರಾಜ್ಯದಲ್ಲೂ ರದ್ದಾಗುತ್ತಾ ‘ದ್ವಿತೀಯ PUC’ ಪರೀಕ್ಷೆ : ಈ ಕುರಿತು ಸಚಿವ ‘ಸುರೇಶ್ ಕುಮಾರ್’ ಹೇಳಿದ್ದೇನು..?

Spread the love

ಬೆಂಗಳೂರು : ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದು, ಈ ನಡುವೆ ರಾಜ್ಯದಲ್ಲೂ ‘ದ್ವಿತೀಯ PUC’, ‘SSLC’ ಪರೀಕ್ಷೆ ರದ್ದಾಗುತ್ತಾ..ರಾಜ್ಯ ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲವಿದೆ.

ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಪರೀಕ್ಷೆ ನಡೆಸಬೇಕೋ/ಬೇಡವೋ ಎಂಬುದರ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯ ಪಠ್ಯಕ್ರಮ ಅನುಸರಿಸಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ ಕುರಿತು ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ಬಗ್ಗೆ ವಿಸ್ಕೃತ ಚರ್ಚೆ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯ ದೃಷ್ಟಿಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳನ್ನ ರದ್ದುಗೊಳಿಸಲಾಗಿದೆ. ಈ ಕುರಿತು ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಸಿಬಿಎಸ್ ಇ ಬೋರ್ಡ್ ಹನ್ನೆರಡನೇ ತರಗತಿ ಪರೀಕ್ಷೆಗಳು ರದ್ದು ಪಡೆಸಲಾಗಿದೆ ಎಂದಿದೆ. ಸಿಬಿಎಸ್ ಇ ಮತ್ತು ಸಿಐಎಸ್ಸಿಇ ವಿದ್ಯಾರ್ಥಿಗಳಿಗೆ ಈ ವರ್ಷ 12ನೇ ತರಗತಿ ಬೋರ್ಡ್ ಪರೀಕ್ಷೆಗಳು ನಡೆಯುವುದಿಲ್ಲ, ನರೇಂದ್ರ ಮೋದಿ ಸರ್ಕಾರದ ಉನ್ನತ ಮಟ್ಟದ ಸಚಿವರ ನಡುವಿನ ಸಭೆಯ ನಂತರ ಈ ನಿರ್ಧಾರಕ್ಕೆ ಬಂದಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ