Breaking News

ಬೆಂಗಳೂರಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಮೇಲೆ ಫೈರಿಂಗ್

Spread the love

ಬೆಂಗಳೂರಿನಲ್ಲಿ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ. ಆರೋಪಿ ಶೂಬೂಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ.

ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೂಬೂಜ್ ಬಂಧನಕ್ಕೆ ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಶರಣಾಗಲು ಸೂಚನೆ ನೀಡಿದರೂ ಆರೋಪಿ ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಲಾಗಿದೆ.

ಪಿಎಸ್‌ಐ ಶಿವರಾಜ್ ಮತ್ತು ದೇವೇಂದ್ರ ನಾಯಕ್ ಗಾಯಗೊಂಡಿದ್ದಾರೆ. ಗುಂಡೇಟು ತಗುಲಿ ಗಾಯಗೊಂಡ ಶೂಬೂಜ್ ನನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ