Breaking News
Home / ಜಿಲ್ಲೆ / ಹಾಸನ / ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ: ಕೋಡಿಶ್ರೀ ಭವಿಷ್ಯ

ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ: ಕೋಡಿಶ್ರೀ ಭವಿಷ್ಯ

Spread the love

ಹಾಸನ: ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ ಎಂಬ ಭವಿಷ್ಯವೊಂದನ್ನು ಹಾಸನ ಜಿಲ್ಲೆಯ ಕೋಡಿಮಠದ ಶ್ರೀಗಳು ನುಡಿದಿದ್ದಾರೆ.

ಹಾಸನದ ಅರಸೀಕೆರೆಯ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ಕೊರೊನಾದಂತಹ ಮಾರಣಾಂತಿಕ ಕಾಯಿಲೆ ದೂರವಾಗಲು ಸುಮಾರು 10 ವರ್ಷಗಳೇ ಬೇಕು. ಭೂಮಿಯಲ್ಲಿ ಈಗಾಗಲೇ ಕೋಟ್ಯಂತರ ಜನರ ಶವವನ್ನು ಹೂತಿದ್ದಾರೆ. ಅದೇ ವಿಷವಾಗಿ ಭೂಮಿಯಿಂದ ಹೊರಬರಲಿದೆ. ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಮುಂದೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ

ಕೊರೊನಾಗಿಂತಲೂ ಭಯಾನಕ ರೋಗ ಮುಂದೆ ಬರುತ್ತದೆ. ಈ ವರ್ಷ “ಕುಂಭದಿ ಗುರು ಬರಲು ತುಂಬುವವು ಕೆರೆ ಕಟ್ಟೆ, ಶಂಭುವಿನ ಪದಸಾಕ್ಷಿ ಡಂಬವೆನ್ನೆಲು ಬೇಡಿದೆನಾ ಎಂದರೆ, ಪ್ರಳಯದ ಮಳೆ ಆಗಲಿದೆ. ಮಿಂಚಿನಿಂದ ದುರ್ಯೋಗ ಇದೆ. ಜಗತ್ತಿನಲ್ಲಿ ಅಪಾಯಕಾರಿ ಘಟನೆಯೊಂದು ನಡೆಯಲಿದೆ. ಇದರ ಜೊತೆಗೆ ರಾಜಕೀಯ ಭೀತಿ ಎದುರಾಗಲಿದೆ. ಅಲ್ಲದೆ ಜಗತ್ತಿನಲ್ಲಿ ದೊಡ್ಡ ದೊಡ್ಡ ತಲೆಗಳು ಉರುಳಲಿವೆ” ಎಂದು ಹೇಳಿದ್ದಾರೆ. ಇದನ್ನೂ ಓದಿ:

ಮುಂದಿನ ದಿನಗಳಲ್ಲಿ ಸಾಮೂಹಿಕ ಸಾವುಗಳು ಸಂಭವಿಸಲಿವೆ. ಸತ್ತು ಹೂಳಲ್ಪಟ್ಟವರು ಕೂಡ ಮಾತನಾಡುತ್ತಾರೆ. ಅದನ್ನು ನೀವು ನೋಡಬಹುದು, ಆದರೆ ನೀವು ಅವರ ಜೊತೆ ಮಾತನಾಡಲು ಸಾಧ್ಯವಿಲ್ಲ. ಇಂಥ ಪ್ರೇತಾತ್ಮಗಳು ಸದ್ಯದಲ್ಲಿಯೇ ಕಂಡರೂ ಕಾಣಿಸದಂತಾಗುತ್ತದೆ. ಆದರೆ ಕರ್ನಾಟಕಕ್ಕೆ ಅಷ್ಟು ತೊಂದರೆಗಳು ಆಗವುದಿಲ್ಲ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಅಜಾನ್ ವಿರುದ್ಧ ಜೂನ್ 1ರಿಂದ ಮತ್ತೆ ಹೋರಾಟ: ಮುತಾಲಿಕ್

Spread the love ಹಾಸನ, ಮೇ 22: “ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ