ಬೆಂಗಳೂರು: ‘ಕೇಂದ್ರ ಸರ್ಕಾರ ನಿರ್ಧರಿಸಿದಂತೆಯೇ ರಾಜ್ಯ ಸರ್ಕಾರ ಕೂಡಾ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಷಕ ಪರೀಕ್ಷೆಗಳನ್ನು ರದ್ದು ಮಾಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಟ್ವೀಟ್ ಮಾಡಿರುವ ಅವರು, ‘ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ ವಿನಾಯಿತಿ ನೀಡಲೇಬೇಕಾಗುತ್ತದೆ’ ಎಂದಿದ್ದಾರೆ.
’12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.
Laxmi News 24×7