ಬೆಳಗಾವಿ: ಕರ್ನಾಟಕದ ಚರಿತ್ರೆಯಲ್ಲೇ ಮೊದಲ ಬಾರಿ ಜೂನ್ 10ರಂದು ಗುರುವಾರ ಬೆಳಿಗ್ಗೆ 9 ಗಂಟೆ 10 ನಿಮಿಷಕ್ಕೆ ಸರಿಯಾಗಿ ಒಂದೇ ದಿನ, ಒಂದೇ ಸಮಯಕ್ಕೆ ನಾಡಿನಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದ್ದು, “ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಕರ್ನಾಟಕ ರಕ್ಷಣ ವೇದಿಕೆ ತಿಳಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರ ಜೂಮ್ ಸಭೆಯಲ್ಲಿ ಈ ಐತಿಹಾಸಿಕ ನಿರ್ಣಯ ಅಂಗೀಕರಿಸಲಾಗಿದ್ದು, ನಾರಾಯಣಗೌಡರ ಜನ್ಮದಿನವೂ ಆಗಿರುವ ಜೂ.10ರಂದು ಲಕ್ಷಾಂತರ ಕರವೇ ಕಾರ್ಯಕರ್ತರು ‘ಪ್ರತಿಭಟನಾ ದಿನ’ವನ್ನಾಗಿ ಆಚರಿಸಿ, ರಾಜ್ಯದ ಸಮಸ್ತ ಜನತೆಯ ಹಕ್ಕೊತ್ತಾಯವನ್ನು ಮಂಡಿಸಲಿದ್ದಾರೆ.
Laxmi News 24×7