Breaking News
Home / ಜಿಲ್ಲೆ / ಬೆಂಗಳೂರು / ಮೆಗಾಸಿಟಿ ವಂಚನೆ ; ಸಚಿವ ಯೋಗೇಶ್ವರ್‌ ವಿರುದ್ದ ಸಿಐಡಿಗೆ ದೂರು

ಮೆಗಾಸಿಟಿ ವಂಚನೆ ; ಸಚಿವ ಯೋಗೇಶ್ವರ್‌ ವಿರುದ್ದ ಸಿಐಡಿಗೆ ದೂರು

Spread the love

ಬೆಂಗಳೂರು: ಮೆಗಾಸಿಟಿ ಡೆವಲಪರ್ಸ್‌ ಕಂಪನಿಯ ಗ್ರಾಹಕರಿಗೆ ವಂಚಿಸಿರುವ ಪ್ರಕರಣದಲ್ಲಿ ಸಚಿವ ಸಿ.ಪಿ. ಯೋಗೇಶ್ವರ್‌ ವಿರುದ್ಧ ಕ್ರಮ ಜರುಗಿಸಿ, ಗ್ರಾಹಕರಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಮೆಗಾಸಿಟಿ ನಿವೇಶನ ಸದಸ್ಯರ ಹಿತರಕ್ಷಣಾ ಸಂಘದ ಅಧ್ಯಕ್ಷ ರವೀಂದ್ರ ಬೆಲೆಯೂರು ಸಿಐಡಿ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

‘1995-2000ದ ಅವಧಿಯಲ್ಲಿ 9,000 ಜನರಿಂದ ₹ 70 ಕೋಟಿ ಸಂಗ್ರಹಿಸಿ ವಂಚಿಸಿರುವ ಆರೋಪ ಮೆಗಾಸಿಟಿ ಡೆವಲಪರ್ಸ್‌ ಮೇಲಿದೆ. 25 ವರ್ಷಗಳಾದರೂ ವಂಚನೆಗೊಳಗಾದ ಗ್ರಾಹಕರಿಗೆ ನ್ಯಾಯ ದೊರಕಿಲ್ಲ. ಕೇಂದ್ರ ಸರ್ಕಾರದ ಗಂಭೀರ ವಂಚನೆ ಪ್ರಕರಣಗಳ ತನಿಖಾ ಕಚೇರಿ (ಎಸ್‌ಎಫ್‌ಐಒ) ಮತ್ತು ರಾಜ್ಯದ ಸಿಐಡಿ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಆದರೂ, ಗ್ರಾಹಕರಿಗೆ ನ್ಯಾಯ ಲಭಿಸಿಲ್ಲ’ ಎಂದು ಮೇ 31ರಂದು ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಗ್ರಾಹಕರ ವೇದಿಕೆಗಳ ಆದೇಶದಂತೆ 69 ಮಂದಿಗೆ ಪಾವತಿಸಬೇಕಿದ್ದ ₹ 4.86 ಕೋಟಿಯನ್ನು 2006ರಿಂದಲೂ ನೀಡಿಲ್ಲ.

ಹೂಡಿಕೆದಾರರ ಹಿತಾಸಕ್ತಿ ರಕ್ಷಣಾ ಕಾಯ್ದೆಯ ಅಡಿಯಲ್ಲೂ ಕ್ರಮ ಜರುಗಿಸಿಲ್ಲ. ಕಂಪನಿಯ ಸಂಸ್ಥಾಪಕರಾದ ಸಚಿವ ಯೋಗೇಶ್ವರ್‌ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಕ್ಷಣ ಮಧ್ಯ ಪ್ರವೇಶಿಸಿ ಗ್ರಾಹಕರಿಗೆ ನ್ಯಾಯ ದೊರಕಿಸಿಕೊಡಬೇಕು ಮತ್ತು ಯೋಗೇಶ್ವರ್‌ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ