Breaking News

ಕೊರೊನಾ ಮಧ್ಯೆ ಶುರುವಾಯ್ತು ಜನರಿಗೆ ಚಿಕನ್ ಗುನ್ಯಾ ಕಾಟ

Spread the love

ಧಾರವಾಡ: ಕೊರೊನಾ ಮಧ್ಯೆ ಗ್ರಾಮವೊಂದಕ್ಕೆ ಕೊರೊನಾ ಮಧ್ಯದಲ್ಲಿ ಈಗ ಚಿಕನ್ ಗುನ್ಯಾ ಕಾಟ ಆರಂಭವಾಗಿದೆ.

ಜಿಲ್ಲೆಯ ಲಕಮಾಪುರ ಎಂಬ 2 ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಚಿಕನ್ ಗುನ್ಯಾ ಕಾಣಿಸಿಕೊಂಡಿದ್ದು. ಕಳೆದ ವಾರ ಗ್ರಾಮದಲ್ಲಿ ಕೈ ಕಾಲು ಬೇನೆ ಬಂದವರಿಗೆ ತಪಾಸಣೆ ಮಾಡಿಸಿದಾಗ, ಗ್ರಾಮದ ಒಬ್ಬರಲ್ಲಿ ಚಿಕನ್ ಗುನ್ಯಾ ಪತ್ತೆಯಾಗಿತ್ತು. ನಂತರ ಗ್ರಾಮದಲ್ಲಿ ಇದು ಹೆಚ್ಚಾಗಬಾರದೆಂದು ಆರೋಗ್ಯ ಇಲಾಖೆಯವರು ಲಾರ್ವಾ ಸರ್ವೇ ಕೂಡಾ ಮಾಡಿಸಿದ್ದರು.

ಈಗ ಗ್ರಾಮದಲ್ಲಿ ಚಿಕನ್ ಗುನ್ಯಾ ಹೆಚ್ಚಾಗಬಾರದೆಂದು ಫಾಗಿಂಗ್ ಕೂಡಾ ಮಾಡಲಾಗುತ್ತಿದೆ. ಎಲ್ಲ ಕಡೆ ಕೊರೊನಾ ಕೂಡಾ ಹೆಚ್ಚಾಗಿರುವ ಕಾರಣ, ನಿನ್ನೆಯಷ್ಟೇ ಇದೇ ಗ್ರಾಮದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. 60 ಜನರಿಗೆ ನಡೆಸಿದ ಕೊರೊನಾ ಟೆಸ್ಟ್‍ನಲ್ಲಿ ಎರಡು ಪಾಸಿಟಿವ್ ಬಂದಿವೆ.

ಸದ್ಯ ಗ್ರಾಮದಲ್ಲಿ ಚಿಕನ್ ಗುನ್ಯಾ ಹೆಚ್ಚಾಗದಂತೆ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದ್ದು, ಜನರಿಗೆ ಸ್ವಚ್ಛತೆ ಕಾಪಾಡಲು ಹಾಗೂ ನೀರು ಬಹಳ ದಿನಗಳ ತುಂಬಿ ಇಡದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಕೊರೊನಾ ಸೋಂಕು ಹರಡದಂತೆ ಗ್ರಾಮದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ