ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯಿಂದ ದಕ್ಷಿಣ ಭಾರತದ ಇಬ್ಬರು ನಟಿಯರನ್ಬು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ನಗರದ ನೌಪಡ ಪ್ರದೇಶದ ಫ್ಲ್ಯಾಟ್‌ನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
‘ಅಮೃತ್ ನಗರದ ಮಹಿಳೆಯೊಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ಪೊಲೀಸರು ಗ್ರಾಹಕರ ವೇಷದಲ್ಲಿ ತೆರಳಿ ಕಾರ್ಯಾಚರಣೆ ನಡೆಸುವ ಮೂಲಕ ದಂಧೆ ಬಯಲಿಗೆಳೆದಿದ್ದಾರೆ’ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಕೃಷ್ಣ ಕೊಕ್ನಿ ಹೇಳಿದ್ದಾರೆ. ಬಂಧಿತ ಆರೋಪಿಗಳನ್ನು ಹಸೀನಾ ಮೆಮನ್, ಸ್ವೀಟಿ, ವಿಶಾಲ್ ಅಲಿಯಾಸ್ ಸುನಿಲ್‌ಕುಮಾರ್ ಉತ್ತಮ್‌ಚಾಂದ್ ಜೈನ್ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಂದ ₹2.14 ಲಕ್ಷ ನಗದು ಮತ್ತು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Laxmi News 24×7