Home / ರಾಜಕೀಯ / ಲಸಿಕೆ ಪಡೆದವರ ಸಂಖ್ಯೆ ೨೨ ಕೋಟಿಗೂ ಅಧಿಕ

ಲಸಿಕೆ ಪಡೆದವರ ಸಂಖ್ಯೆ ೨೨ ಕೋಟಿಗೂ ಅಧಿಕ

Spread the love

ನವದೆಹಲಿ, : ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ನಡುವೆ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 22 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 138 ದಿನಗಳಲ್ಲಿ 22,08,62,449 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಬುಧವಾರ ರಾತ್ರಿ 7 ಗಂಟೆ ವೇಳೆಗೆ 22,45,112 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 20,28,867 ಜನರಿಗೆ ಮೊದಲ ಡೋಸ್ ಹಾಗೂ 2,16,245 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 2,25,40,803 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 59,052 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 99,11,519 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 68,14,165 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,58,39,812 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 85,76,750 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,78,25,793 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,09,67,786 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,93,85,071 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,89,41,698 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ