Breaking News

39 ಮಕ್ಕಳಿಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು

Spread the love

ಹಾಸನ: ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂಬ ತಜ್ಞರ ಎಚ್ಚರಿಕೆ ಬೆನ್ನಲ್ಲೇ ಹಾಸನ ಜಿಲ್ಲೆಯಲ್ಲಿ 39 ಮಕ್ಕಳು ಕೊರೋನಾ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವುದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ.

ಹಾಸನದಲ್ಲಿ ಕಳೆದ 7 ದಿನಗಳಿಂದ 15 ವರ್ಷದೊಳಗಿನ 39 ಮಕ್ಕಳು ಕೊರೋನಾ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಜಿಲ್ಲಾ ಸರ್ಜನ್ ಡಾ.ಕೃಷ್ಣಮೂರ್ತಿಯವರು ಮಾಹಿತಿ ನೀಡಿ, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್‌) ಆಸ್ಪತ್ರೆಯಲ್ಲಿ 7 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆಯಲ್ಲಿ ಮಕ್ಕಳಿಗಾಗಿಯೇ 50 ಆಕ್ಸಿಜನ್ ಬೆಡ್ ಗಳನ್ನು ಮೀಸಲಿಡಲಾಗಿದೆ. ಎಲ್ಲಾ ಮಕ್ಕಳ ಆರೋಗ್ಯ ಸ್ಥಿರವಾಗಿದೆ. ಕೋವಿಡ್ ಟಾಸ್ಕ್ ಫೋರ್ಸ್ ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ ಎಂದು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವ ಮಕ್ಕಳ ಕುರಿತು ಸಮಿತಿಯು ವಿಸ್ತೃತ ವರದಿಯನ್ನು ಸಿದ್ಧಪಡಿಸಿದೆ. ಸೋಂಕಿಗೊಳಗಾಗಿ ದಾಖಲಾಗುತ್ತಿರುವ ಎಲ್ಲಾ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಕಾಳಜಿವಹಿಸಿ ಚಿಕಿತ್ಸೆ ನೀಡುವಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾ ಆಡಳಿತ ಮಂಡಳಿ ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಜಿಲ್ಲೆಯ ಅಧಿಕಾರಿ ಡಾ.ಸತೀಶ್ ಅವರು ಮಾತನಾಡಿ, ಮಕ್ಕಳಲ್ಲಿ ಮರಣ ಪ್ರಮಾಣ ಅತ್ಯಂತ ಕಡಿಮೆ. ಸೋಂಕು ಕುರಿತು ಪೋಷಕರು ಹಾಗೂ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಕಾರ್ಯಕರ್ತರು ಸತತ ಪ್ರಯತ್ನಗಳನ್ನು ಪಡುತ್ತಿದ್ದಾರೆಂದು ಹೇಳಿದ್ದಾರೆ.

ಕೊರೋನಾ ಮೂರನೇ ಅಲೆ ಎದುರಿಸುಲ ಆರೋಗ್ಯ ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೊರೋನಾ ಮೂರನೇ ಅಲೆ ಮಕ್ಕಳ ಪರಿಣಾಮ ಬೀರುತ್ತದೆ. ಆದರೆ, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುವುದರಿಂದ ಅತ್ಯಂತ ಶೀಘ್ರಗತಿಯಲ್ಲಿ ಗುಣಮುಖರಾಗುತ್ತದೆ. ಏನೇ ಆದರೂ ಮಕ್ಕಳು ಅತ್ಯಂತ ಸುರಕ್ಷಿತರಾಗಿರಬೇಕು. ಕೊರೋನಾ ಸೋಂಕು ತಗುಲದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಕ್ಕಳ ವೈದ್ಯ ಡಾ.ಉಮೇಶ್ ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ನಾವೆಲ್ಲರು ಜೆಡಿಎಸ್​ ಪರ ಕೆಲಸ ಮಾಡ್ಬೇಕು: ಕಾರ್ಯಕರ್ತರಿಂದ ಪ್ರತಿಜ್ಞೆ ಮಾಡಿಸಿದ ಎ. ಮಂಜು

Spread the love ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅರಕಲಗೂಡು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಮಾಜಿ ಸಚಿವ ಎ. ಮಂಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ