Breaking News

ಮಾಜಿ ಸ್ಪೀಕರ್​ ರಮೇಶ್​ಕುಮಾರ್​ ಪ್ರತಿಭಟನೆ: ಲಾಕ್​ಡೌನ್ ವೇಳೆ ಕಿರುಕುಳ ನೀಡ್ತಿದ್ದ PSI ಅಮಾನತು

Spread the love

ಕೋಲಾರ: ಲಾಕ್​ಡೌನ್​ ಸಂದರ್ಭದಲ್ಲಿ ಆಂಧ್ರ ಹಾಗೂ ಕರ್ನಾಟಕ ಗಡಿಯ ಚೆಕ್​ಪೋಸ್ಟ್​ನಲ್ಲಿ ರೈತರ ವಾಹನಗಳನ್ನು ಹಿಡಿದು ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ರಾಯಲ್ಪಾಡು ಪೊಲೀಸ್​ ಠಾಣೆ ಪಿಎಸ್​ಐ ನರಸಿಂಹಮೂರ್ತಿ ಯನ್ನು ಅಮಾನತು ಮಾಡಲಾಗಿದೆ.

ಶ್ರೀನಿವಾಸಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ಗೆ ಸ್ಥಳೀಯರಿಂದ ಪಿಎಸ್​ಐ ನರಸಿಂಹ ಮೂರ್ತಿ ಅವರು ಸಾರ್ವಜನಿಕರಿಗೆ ಅನತ್ಯವಾಗಿ ಕಿರುಕುಳ ನೀಡಿ ಜನರಿಂದ ಹಣ ವಸೂಲಿ ಮಾಡುತಿದ್ದಾರೆ ಎಂಬ ದೂರು ಬಂದ ಹಿನ್ನೆಲೆ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದರು. ಈ ವೇಳೆ ರಾಯಲ್ಪಾಡು ಚೆಕ್​ ಪೋಸ್ಟ್​ ಬಳಿ ಕೆಲಕಾಲ ಮೌನ ಪ್ರತಿಭಟನೆ ಮಾಡಿದ ರಮೇಶ್​ ಕುಮಾರ್​ ಪಿಎಸ್​ಐ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು.

ಪಿಎಸ್​ಐ, ರಾಯಲ್ಪಾಡು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕೆಲವು ಜೂಜು ಅಡ್ಡೆಗಳಿಗೂ ಕುಮ್ಮಕ್ಕು ನೀಡಿ ಹಣ ವಸೂಲಿ ಮಾಡುತ್ತಿದ್ದರು ಎಂಬ ದೂರು ಸಹ ಕೇಳಿ ಬಂದಿದೆ. ಈ ಹಿನ್ನೆಲೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್​ ಪಿಎಸ್​ಐ ರನ್ನು ಕೂಡಲೇ ಅಮಾನತು ಮಾಡಿ ಅದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ