Breaking News

ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ

Spread the love

ಬೆಂಗಳೂರು: ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ.

ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್​ ಘೋಷಿಸಿರುವ ಸಿಎಂ ಯಡಿಯೂರಪ್ಪ, ತಲಾ 3000ದಂತೆ ಮಗ್ಗಗಳ ಕಾರ್ಮಿಕರಿಗೆ,
ಚಲನಚಿತ್ರ, ದೂರದರ್ಶನ ಕಲಾವಿದರಿಗೆ ತಲಾ ₹3000, ಮೀನುಗಾರರಿಗೆ ತಲಾ 3000 ರೂ, ಅರ್ಚಕರು, ಅಡುಗೆ ಕೆಲಸಗಾರರಿಗೆ ತಲಾ ₹3000,
ಸಿ ವರ್ಗದ ದೇವಸ್ಥಾನದ ಅರ್ಚಕರು, ಅಡುಗೆ ಕೆಲಸ, ಸಹಾಯಕರು, ಮಸೀದಿ ಫೇಶಿಮಾಂ, ಮೌಂಜನ್​ಗೆ ತಲಾ ₹3000 ಆಶಾ ಕಾರ್ಯಕರ್ತೆಯರಿಗೂ ತಲಾ ತಲಾ ₹3000, ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ ತಲಾ ₹2000, ಶಾಲಾ ಮಕ್ಕಳಿಗೆ ಜೂನ್, ಜುಲೈನಲ್ಲಿ ಹಾಲಿನ ಪುಡಿ ನೀಡಿಕೆ, ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ತಲಾ 5000 ರೂ. ಸಹಾಯ ಧನ ಘೋಷಿಸಿದ್ದಾರೆ.

ಪಾಸಿಟಿವಿಟಿ ರೇಟ್​ ಶೇ.5ಕ್ಕಿಂತ ಕಡಿಮೆಯಾದರೆ ರಿಲೀಫ್ ನೀಡಲಾಗುವುದು. ಲಾಕ್​ಡೌನ್​ ನಿಯಮಗಳನ್ನು ಸಡಿಲ ಮಾಡಲಾಗುವುದು. ಜನರು ಸಹಕರಿಸಿದರೆ ಲಾಕ್​ಡೌನ್​ ಸಡಿಲಿಸಲಾಗುವುದು. ಆದರೆ ಒಂದು ವಾರ ಯಾವುದೇ ಬದಲಾವಣೆ ಇಲ್ಲ ಎಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ