Breaking News

ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ

Spread the love

ಬೆಂಗಳೂರು: ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ’ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್ ಗೆ ಅಸಾಧ್ಯವೇ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ ಗೂಗಲ್ ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೂಗಲ್‌ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ