Home / ರಾಜ್ಯ / ಇಂದು ಸಹ ಏರಿಕೆ ಕಂಡು ಗರಿಷ್ಠ ಮಟ್ಟದಲ್ಲಿರುವ ಪೆಟ್ರೋಲ್​, ಡೀಸೆಲ್​ ದರ! ಯಾವ ಯಾವ ನಗರಗಳಲ್ಲಿ ಎಷ್ಟೆಷ್ಟು?

ಇಂದು ಸಹ ಏರಿಕೆ ಕಂಡು ಗರಿಷ್ಠ ಮಟ್ಟದಲ್ಲಿರುವ ಪೆಟ್ರೋಲ್​, ಡೀಸೆಲ್​ ದರ! ಯಾವ ಯಾವ ನಗರಗಳಲ್ಲಿ ಎಷ್ಟೆಷ್ಟು?

Spread the love

ದೆಹಲಿ: ಇಂದೂ ಸಹ (ಜೂನ್ 4) ಪೆಟ್ರೋಲ್ ​ಮತ್ತು ಡೀಸೆಲ್ ಬೆಲೆ​ ಏರಿಕೆ ಕಂಡಿದೆ. ಜೂನ್​ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ 2ನೇ ಬಾರಿ ತೈಲ ದರ ಹೆಚ್ಚಳವಾಗಿದ್ದು, ಇಂದು ಲೀಟರ್​ ಪೆಟ್ರೋಲ್​ ದರದಲ್ಲಿ 27 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 28 ಪೈಸೆ ಹೆಚ್ಚಳ ಮಾಡಲಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 94.49 ರೂಪಾಯಿಂದ 94.76 ರೂಪಾಯಿಗೆ ಏರಿಕೆ ಆಗಿದೆ. ಹಾಗೆಯೇ ಒಂದು ಲೀಟರ್​ ಡೀಸೆಲ್​ ದರವೂ ಕೂಡಾ 85.38 ರೂಪಾಯಿಯಿಂದ 85.66 ರೂಪಾಯಿಗೆ ಏರಿಕೆಯಾಗಿದೆ.

ಕಳೆದ ಮೇ ತಿಂಗಳಿನಲ್ಲಿ ಒಟ್ಟು 16 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿತ್ತು. ಜೂನ್​ ತಿಂಗಳ ಆರಂಭದಿಂದ ಇಲ್ಲಿಯವರೆಗೆ ಒಟ್ಟು ಎರಡು ಬಾರಿ ಏರಿಕೆಯಾಗಿದೆ. ಒಟ್ಟಾರೆಯಾಗೆ ಮೇ ತಿಂಗಳ ಪ್ರಾರಂಭದಿಂದ ಇಲ್ಲಿಯವರೆಗೆ ಪೆಟ್ರೋಲ್​ ಮತ್ತು ಡೀಸೆಲ್​ ದರ 18 ಬಾರಿ ಏರಿಕೆ ಕಂಡಿದೆ.ಈ ಮೂಲಕ ಲೀಟರ್​ ಪೆಟ್ರೋಲ್​ನಲ್ಲಿ 4.36 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 4.93 ರೂಪಾಯಿಯಷ್ಟು ಹೆಚ್ಚಳವಾಗಿದೆ.

ವಾಣಿಜ್ಯ ನಗರಿ ಮುಂಬೈ ನಗರದಲ್ಲಿ ಈಗಾಗಲೇ ಲೀಟರ್​ ಪೆಟ್ರೋಲ್​ ದರ ಶತಕ ಬಾರಿಸಿದೆ. ಹಾಗಾಗಿಯೂ ಏರಿಕೆಯತ್ತ ಕಾಣುತ್ತಿರುವ ತೈಲ ದರದಿಂದಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಲೀಟರ್​ ಪೆಟ್ರೋಲ್​ ದರ 100.98 ರೂ. ಹಾಗೂ ಲೀಟರ್​ ಡೀಸೆಲ್​ ದರ 92.99 ರೂಪಾಯಿ ಆಗಿದೆ. ಕೊಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 94.76 ರೂಪಾಯಿಗೆ ಏರಿಕೆಯಾಗಿದೆ. ಹಾಗೆಯೇ ಲೀಟರ್​ ಡೀಸೆಲ್​ ದರ 88.51 ರೂಪಾಯಿ ನಿಗದಿಯಾಗಿದೆ. ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 97.92 ರೂಪಾಯಿಗೆ ಹೆಚ್ಚಳವಾಗಿದೆ.

ಇನ್ನು, ಚೆನ್ನೈನಲ್ಲಿಲೀಟರ್​ ಪೆಟ್ರೋಲ್​ಗೆ 96.23 ರೂ. ಹಾಗೂ ಲೀಟರ್​ ಡೀಸೆಲ್​ ದರ 90.38 ರೂಪಾಯಿ ಹೆಚ್ಚಳವಾಗಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ಕೆಲವು ನಗರಗಳಲ್ಲಿ ಪೆಟ್ರೋಲ್​ ದರ ಈಗಾಗಲೇ ಶತಕ ಬಾರಿಸಿದ್ದು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ಈ ಗುಂಪಿಗೆ ಮುಂಬೈ ನಗರವೂ ಕೂಡ ಕಳೆದ ಮೇ ತಿಂಗಳಿನಲ್ಲಿ ಸೇರ್ಪಡೆಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ