ಬೆಂಗಳೂರು: ಶೇಕಡಾ 30ರಷ್ಟು ಪಠ್ಯವನ್ನು ಕಡಿತಗೊಳಿಸುವ ನಿರ್ಧಾರವನ್ನು ಸರ್ಕಾರ ಬದಲಿಸಿದ್ದು ಟಿಪ್ಪು ಸುಲ್ತಾನ್ (Tippu Sultan) ಮತ್ತು ಸಂವಿಧಾನದ ಬಗ್ಗೆ ಪಠ್ಯ ಕಡಿತ ಮಾಡಿದ ವಿವಾದ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯ ಹಿಂಪಡೆಯಲು ಸರ್ಕಾರ ಸೂಚನೆ ನೀಡಿದೆ ಎಂದು ಹೇಳಲಾಗಿದೆ.
ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್, ಹೈದರ್ ಅಲಿಗೆ ಸಂಬಂಧಿಸಿದ ಹಲವಾರು ಅಧ್ಯಾಯಗಳನ್ನು 7 ನೇ ತರಗತಿಯ ಪಠ್ಯಪುಸ್ತಕದಿಂದ ಕೈಬಿಟ್ಟಿದ್ದಕ್ಕಾಗಿ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸದ್ಯಕ್ಕೆ ಪಠ್ಯ ಕಡಿತ ಜಾರಿಗೊಳಿಸದಿರಲು ಚಿಂತನೆ ನಡೆಸಲಾಗಿದೆ
ವೆಬ್‌ಸೈಟ್‌ನಲ್ಲಿ ಅಪ್ ಲೋಡ್ ಮಾಡಲಾಗಿದ್ದ ಪರಿಷ್ಕೃತ ಪಠ್ಯವನ್ನು ಹಿಂಪಡೆಯಲು ಕರ್ನಾಟಕ ಪಠ್ಯಪುಸ್ತಕ ಸಂಘಕ್ಕೆ ನಿರ್ದೇಶನ ನೀಡಲಾಗಿದೆ ಎನ್ನಲಾಗಿದೆ.
ಬಿಜೆಪಿ ಸರ್ಕಾರ ಇತಿಹಾಸ ತಿರುಚಲು ಬಿಡಲ್ಲ: ಡಿ.ಕೆ ಶಿವಕುಮಾರ್
ಕರ್ನಾಟಕ ಟೆಕ್ಸ್ಟ್ ಬುಕ್ ಸೊಸೈಟಿ (ಕೆಟಿಬಿಎಸ್) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಪರಿಷ್ಕೃತ ಪಠ್ಯಕ್ರಮವು 7 ನೇ ತರಗತಿಯಲ್ಲಿ, ಸಾಮಾಜಿಕ ವಿಜ್ಞಾನ ಪಠ್ಯ, ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್, ಮೈಸೂರಿನ ಐತಿಹಾಸಿಕ ಸ್ಥಳಗಳು ಮತ್ತು ಆಯುಕ್ತರ ಆಡಳಿತವನ್ನು ಕೈಗೊಳ್ಳುವ 5 ನೇ ಅಧ್ಯಾಯವನ್ನು ಕೈಬಿಡಲಾಗಿದೆ ಎಂದು ತೋರಿಸುತ್ತದೆ.