ಹುಬ್ಬಳ್ಳಿ: ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಪಿಆರ್ ಒ, ವಾರ್ಡ್ ಬಾಯ್ ಸೇರಿದಂತೆ ಮೂವರನ್ನು ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಆರೋಪದಡಿ, ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಕಿಮ್ಸ್ ಆಸ್ಪತ್ರೆ ಹಿಂಭಾಗದ ಬೈಲಪ್ಪನವರ ನಗರದ ಪೈ ಹೊಟೇಲ್ ಬಳಿಯ ಔಷಧ ಅಂಗಡಿಯಲ್ಲಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಇಂಜೆಕ್ಷನ್ ಸಮೇತ ಮೂವರನ್ನು ಬಂಧಿಸಿದ್ದಾರೆ.
ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7