Breaking News

ಕಪ್ಪು ಶಿಲೀಂಧ್ರ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ: ಹುಬ್ಬಳ್ಳಿಯಲ್ಲಿ ಮೂವರ ಬಂಧನ

Spread the love

ಹುಬ್ಬಳ್ಳಿ: ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಪಿಆರ್ ಒ, ವಾರ್ಡ್ ಬಾಯ್ ಸೇರಿದಂತೆ ಮೂವರನ್ನು ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಆರೋಪದಡಿ, ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

 

ಇಲ್ಲಿನ ಕಿಮ್ಸ್ ಆಸ್ಪತ್ರೆ ಹಿಂಭಾಗದ ಬೈಲಪ್ಪನವರ ನಗರದ ಪೈ ಹೊಟೇಲ್ ಬಳಿಯ ಔಷಧ ಅಂಗಡಿಯಲ್ಲಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಇಂಜೆಕ್ಷನ್‌ ಸಮೇತ ಮೂವರನ್ನು ಬಂಧಿಸಿದ್ದಾರೆ.

ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ