ಬೆಳಗಾವಿ: ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದ್ದು, ಕಬ್ಬಿನ ಬಾಕಿ ಬಿಲ್ ಗಾಗಿ ಆಗ್ರಹಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಸುವರ್ಣ ವಿಧಾನಸೌಧದಲ್ಲಿ ಪ್ರಮುಖ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ರೈತರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಬೆಳಗ್ಗೆ ಸುವರ್ಣ ವಿಧಾನಸೌಧ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಕಬ್ಬಿನ ಬಿಲ್ ಬಾಕಿ ಪಾವತಿಸಲು ಸಿಎಂ ಕ್ರಮ ಕೈಗೊಳ್ಳಬೇಕು. ತರಕಾರಿ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಆರೋಪಿಸಿ ರೈತ ಮುಖಂಡ ಚೂನಪ್ಪ ಪೂಜಾರಿ, ರಾಘವೇಂದ್ರ ನಾಯಕ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಕೂಡಲೇ ಸ್ಥಳಕ್ಕೆ ಧಾವಿಸಿದ ಹಿರೇಬಾಗೇವಾಡಿ ಇನ್ಸಪೆಕ್ಟರ್ ವಿಜಯ ಸಿನ್ನೂರ ಹಾಗೂ ಸಿಬ್ಬಂದಿ ಅವರೊಂದಿಗೆ ರೈತ ಮುಖಂಡರು ವಾಗ್ವಾದ ನಡೆಸಿದರು. ಹಿರೇಬಾಗೇವಾಡಿ ಪೊಲೀಸರು ರೈತರನ್ನು ವಶಕ್ಕೆ ಪಡೆದುಕೊಂಡರು.
Laxmi News 24×7