Breaking News

ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡಿ ರೋಗಿಗಳಿಗೆ ಉತ್ತೇಜನ ನೀಡಲು ಮುಂದಾದ ಶಾಸಕ ರೇಣುಕಾಚಾರ್ಯ

Spread the love

ದಾವಣಗೆರೆ: ಕೊರೋನಾ ಸೋಂಕಿನ ವಿಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.

ಕೊರೋನಾ ಸೋಂಕಿತರು ಉಳಿದುಕೊಂಡಿರುವ ದಾವಣಗೆರೆಯ ಅರಬಗಟ್ಟೆ ಕೋವಿಡ್ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ ಹೂಡಿದ್ದಾರೆ. ಸೋಂಕಿತರಲ್ಲಿ ಆತ್ಮವಿಶ್ವಾಸ ಮೂಡಲು, ಅವರಿಗೆ ಉತ್ತೇಜನ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ.

ಇಂದಿನಿಂದ ಮೂರು ದಿನಗಳ ಕಾಲ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ನಿಮ್ಮೊಂದಿಗೆ ನಾನಿದ್ದೇನೆಂದು ಮನೋಬಲ ತುಂಬಲು ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಮಾಡುತ್ತಿದ್ದೇನೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ