ಬೆಳಗಾವಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಸಿಬಿಐ ತನಿಖೆ ನಡೆಸುವ ಎಚ್ಚರಿಕೆಯನ್ನು ಶಾಸಕ ಅಭಯ ಪಾಟೀಲ ನೀಡಿದ್ದಾರೆ.
ಕೋವಿಡ್ ಚಿಕಿತ್ಸೆಯಲ್ಲಿ ಮನಬಂದಂತೆ ಸೋಂಕಿತರಿಂದ ಹಣವಸೂಲಿ ಮಾಡಲಾಗಿದೆ ಎಂದು ಆರೋಪಿಸಿರುವ ಅವರು ತಕ್ಷಣ ಹೆಚ್ಚುವರಿಯಾಗಿ ಪಡೆದಿರುವ ಹಣವನ್ನು ವಾಪಸ್ ನೀಡಿ. ಇಲ್ಲವಾದಲ್ಲಿ ಆಸ್ಪತ್ರೆಗಳ ವಿರುದ್ಧ ಸಿಬಿಐ ತನಿಖೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ 28 ಆಸ್ಪತ್ರೆಗಳ ಪೈಕಿ 23ರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಣ ಪಡೆಯಲಾಗಿದೆ. ಹೆಚ್ಚುವರಿ ಹಣವನ್ನು ನಗದು ರೂಪದಲ್ಲಿ ವಸೂಲು ಮಾಡಲಾಗಿದೆ. ಎಲ್ಲವೂ ಗಮನಕ್ಕೆ ಬಂದಿದೆ. ಕೂಡಲೆ ಸಂಬಂಧಿಸಿದವರಿಗೆ ಹಣವನ್ನು ಹಿಂತಿರುಗಿಸಬೇಕು ಎಂದು ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಬೆಳಗಾವಿಯಲ್ಲಿ ನಡೆಸಿದ ಸಭೆಯಲ್ಲಿ ಜಿಲ್ಲೆಯ ಪರವಾಗಿ ಮಂಡಿಸಿದ ಎಲ್ಲ ಬೇಡಿಕೆಗಳಿಗೂ ಸ್ಪಂದನೆ ಸಿಕ್ಕಿದೆ ಎಂದೂ ಅವರು ತಿಳಿಸಿದ್ದಾರೆ.
Laxmi News 24×7