Breaking News

ಗೋವಾ : ಜುಲೈ 31ರೊಳಗೆ ರಾಜ್ಯದ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಲಸಿಕೆ : ಸಾವಂತ್

Spread the love

ಪಣಜಿ : ಗೋವಾದಲ್ಲಿ ಜುಲೈ 31 ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಕೋವಿಡ್ ಲಸಿಕೆಯನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಪ್ರಥಮವಾಗಿ ಕೋವಿಡ್ ಲಸಿಕೆಯನ್ನು ಹಾಕುವ ಕಾರ್ಯಕ್ರಮವನ್ನು ಪೂರ್ಣಗೊಳಿಸುವತ್ತ ಸರ್ಕಾರ ಲಕ್ಷ್ಯ ವಹಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇನ್ನು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾಡುವ ಉದ್ದೇಶದಿಂದ ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಕೋವಿಡ್ ಸೋಂಕಿನ ಹೊಸ ಪ್ರಕರಣ್ಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದ್ದು ಹಾಗೂ ಸಾವಿನ ಸಂಖ್ಯೆಯೂ ಕೂಡ ಕಡಿಮೆಯಾಗುತ್ತಿದೆ. ಸಂಭವನೀಯ ಕೋವಿಡ್ ಸೋಂಕಿನ ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದಿದ್ದಾರೆ.

ಇದುವರೆಗೆ ರಾಜ್ಯದಲ್ಲಿ 3,37,774 ಜನರಿಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ. 96,501 ಜನರಿಗೆ ಲಸಿಕೆಯ ಎರಡೂ ಡೋಸ್ ನೀಡಲಾಗಿದೆ. ರಾಜ್ಯಕ್ಕೆ ಇದುವರೆಗೂ 7,31,720 ಡೋಸ್ ಲಸಿಕೆ ಬಂದಿದ್ದು, ಇದನ್ನು ರಾಜ್ಯದ ಜನತೆಗೆ ಪ್ರಾಮುಖ್ಯತೆಗನುಗುಣವಾಗಿ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ