Breaking News
Home / ಜಿಲ್ಲೆ / ಬೆಂಗಳೂರು / ಮುಂಗಾರು ಆಗಮನ : ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಣೆ

ಮುಂಗಾರು ಆಗಮನ : ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಣೆ

Spread the love

ಬೆಂಗಳೂರು: ರಾಜ್ಯಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿರುವುದರಿಂದ ರಾಜ್ಯದಲ್ಲಿ ಇಂದಿನಿಂದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೇ ಅಂತ ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆ, ದಕ್ಷಿಣ ಒಳನಾಡು ಪ್ರವೇಶಿಸಿರುವ ಮುಂಗಾರು, ಉತ್ತರ ಒಳನಾಡಿಗೆ ಶನಿವಾರ ಪ್ರವೇಶಸಲಿದ್ದು, ಈ ನಿಟ್ಟಿನಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದರು. ಧಾರವಾಡ, ಹಾವೇರಿ, ಬಿಜಾಪುರ , ಬಾಗಲಕೋಟೆ , ಬೆಳಗಾವಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಕೋಲಾರ ,ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು ಚಾಮರಾಜನಗರದಲ್ಲಿ ಮಳೆಯಾಗಲಿದ್ದು ಎಲ್ಲೋ ಅಲರ್ಟ್ ಕೊಡಲಾಗಿದೆ ಎಂದು ತಿಳಿಸಿದ್ದಾರೆ. . ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆ ನಿರೀಕ್ಷಿಸಲಾಗಿದ್ದು, ಈಗಾಗಲೇ ರೈತಾಪಿ ವರ್ಗ ತಮ್ಮ ಹೊಲಗಳನ್ನು ಹಸನು ಮಾಡಲು ತೊಡಗಿಸಿಕೊಂಡಿದ್ದು, ಭೂಮಿಯನ್ನು ಬಿತ್ತನೆಗಾಗಿ ಹದ ಮಾಡಿ, ಬಿತ್ತನೆಗೂ ಮುನ್ನ ಗೊಬ್ಬರ ಕೊಡುತ್ತಿರುವುದನ್ನು ಕಾಣಬಹುದಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ