Breaking News

ಬೈಕ್ ನಲ್ಲಿ ಬಂದು ಮಹಿಳೆಯರ ಹಿಂಭಾಗ ಸ್ಪರ್ಶಿಸಿ ಪರಾರಿಯಾಗ್ತಿದ್ದ ಕೀಚಕ; ಸೈಕೊ ಅರುಣ್ ಪೊಲೀಸರ ಬಲೆಗೆ

Spread the love

ಬೆಂಗಳೂರು: ಬೈಕ್ ನಲ್ಲಿ ಬಂದು ಮಹಿಳೆಯರ ಹಿಂಭಾಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗುತ್ತಿದ್ದ ಸೈಕೋನೋರ್ವನನ್ನು ಬೆಂಗಳೂರು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೆಜಿಎಫ್ ರಾಬರ್ಟ್ ಪೇಟೆಯ ಸೈಕೋ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಬೈಕ್ ನಲ್ಲಿ ಅಡ್ಡಾಡುತ್ತಾ ಮಹಿಳೆಯರ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ಹಲವು ಯುವತಿಯರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಅರುಣ್ ಈವರೆಗೂ ಪೊಲೀಸರ ಕೈಗೆ ಸಿಕ್ಕಿರಲಿಲ್ಲ.

ಮೇ 31ರ ರಾತ್ರಿ ಕೋರಮಂಗಲದಲ್ಲಿ ಉತ್ತರ ಭಾರತ ಮೂಲದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಈ ಬಗ್ಗೆ ಯುವತಿ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿ ದೂರು ನೀಡಿದ್ದಳು. ಸಿಸಿ ಟಿವಿ ಕ್ಯಾಮರಾ ದೃಶ್ಯ ಹಾಗೂ ಬೈಕ್ ನಂಬರ್ ಆಧರಿಸಿ ಇದೀಗ ಆರೋಪಿ ಅರುಣ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ