Breaking News

ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನೂ ಎತ್ತಂಗಡಿ ಮಾಡಿದ ರಾಜ್ಯ ಸರಕಾರ

Spread the love

ಬೆಂಗಳೂರು – ಕಳೆದ ಕೆಲವು ದಿನಗಳಿಂದ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನೂ ರಾಜ್ಯ ಸರಕಾರ ಎತ್ತಂಗಡಿ ಮಾಡಿದೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನು ಶನಿವಾರ ರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ರೋಹಿಣಿ ಸಿಂಧೂರಿ ಅವರನ್ನು ಧರ್ಮದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದ್ದು ಅವರ ಜಾಗಕ್ಕೆ ಗೌತಮ್ ಬಗಾದಿ ಅವರನ್ನು ಹಾಕಲಾಗಿದೆ.

ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

ಬಿಬಿಎಂಪಿ ವಿಶೇಷ ಆಯುಕ್ತರನ್ನಾಗಿ ದಯಾನಂದ ಹಾಗೂ ಬೆಸ್ಕಾಂ ಆಡಳಿತ ನಿರ್ದೇಶಕರನ್ನಾಗಿ ಬಿಬಿಎಂಪಿ ವಿಶೇಷ ಆಯುಕ್ತ ರಾಜೇಂದ್ರ ಚೋಳನ್ ಅವರಿಗೆ ಹೆಚ್ಚುವರಿ ಹುದ್ದೆ ನೀಡಲಾಗಿದೆ.

ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾ ನಾಗ್ ಜಗಳ ರಾಜ್ಯ ಸರಕಾರಕ್ಕೆ ಮುಜುಗರವನ್ನುಂಟು ಮಾಡಿತ್ತು.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Spread the loveಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಎಸ್‌ಐಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ