Breaking News

ಸ್ವಿಮ್ಮಿಂಗ್ ಪೂಲ್ ನಿರ್ಮಾಣದ ಬಗ್ಗೆ ಉತ್ತರ ಕೊಟ್ಟ ಸಿಂಧೂರಿ

Spread the love

ಮೈಸೂರು: ನಿರ್ಗಮಿತ ಮೈಸೂರು ಡಿ.ಸಿ ರೋಹಿಣಿ ಸಿಂಧೂರಿ ಕಳೆದ ಒಂದು ತಿಂಗಳಿನಿಂದ ಹಲವು ವಿಚಾರಗಳಲ್ಲಿ ಜನಪ್ರತಿನಿಧಿಗಳ ಆರೋಪಗಳಿಗೆ ಗುರಿಯಾಗಿದ್ದರು. ಅದ್ರಲ್ಲಿ ಜಿಲ್ಲಾಧಿಕಾರಿಯ ಸರ್ಕಾರಿ ನಿವಾಸದಲ್ಲಿ ಹೈಟೆಕ್​ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡಿಸಿದ ವಿಚಾರವೂ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಸಿಂಧೂರಿ ಸರ್ಕಾರಕ್ಕೆ ಉತ್ತರ ಕೊಟ್ಟಿದ್ದಾರೆ.

ಡಿಸಿ ಮನೆ ಬಳಿ ಸ್ವಿಮ್ಮಿಂಗ್‌ಪೂಲ್ ನಿರ್ಮಾಣ‌ ಮಾಡಬೇಕೆಂಬುದು ಐದು ವರ್ಷಗಳ ಹಿಂದಿನ ಯೋಜನೆ ಎಂದು ನಿಖಾಧಿಕಾರಿ, ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಅವರಿಗೆ ರೋಹಿಣಿ ಸಿಂಧೂರಿ ಎರಡು ಪುಟಗಳ ಉತ್ತರ ಸಲ್ಲಿಸಿದ್ದಾರೆ.

 

ಜಿಲ್ಲಾಧಿಕಾರಿ ವಸತಿ ಕಚೇರಿ ಆವರಣದಲ್ಲಿ ಈಜುಕೊಳ ನಿರ್ಮಿಸಬೇಕೆಂಬುದು ಐದು ವರ್ಷಗಳ ಹಿಂದಿನ ಯೋಜನೆ. ಎಲ್ಲಾ ಜಿಲ್ಲಾಧಿಕಾರಿ ವಸತಿ ಕಚೇರಿಯಲ್ಲೂ ಹೊಸ ತಂತ್ರಜ್ಞಾನ ಬಳಸಿ ನಿರ್ಮಾಣ ಕಾರ್ಯ ನಡೆಸಲು ನಿರ್ಮಿತಿ ಕೇಂದ್ರ ನಿರ್ಧರಿಸಿತ್ತು. ಅದರ ಪ್ರಾಯೋಗಿಕ ಯೋಜನೆಯಾಗಿ ಈಜುಕೊಳ ನಿರ್ಮಾಣವಾಗಿದೆ. ನಿರ್ಮಿತಿ ಕೇಂದ್ರದಿಂದ ₹28.72 ಲಕ್ಷದಲ್ಲಿ ಈಜುಕೊಳ ನಿರ್ಮಾಣವಾಗಿದೆ. ಇದರಿಂದ ಪಾರಂಪರಿಕ ಕಟ್ಟಡಕ್ಕೆ ಧಕ್ಕೆಯಾಗಿಲ್ಲ ಎಂದು ಸಿಂಧೂರಿ ಸ್ಪಷ್ಟನೆ ನೀಡಿದ್ದಾರೆ.


Spread the love

About Laxminews 24x7

Check Also

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ

Spread the love ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ ಬಿಎಸ್ಎಫ್ ಯೋಧ ದಗಡು ಪೂಜಾರಿ ರಜೆಯ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ