Breaking News
Home / Uncategorized / ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ

ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ

Spread the love

ಚಿಕ್ಕೋಡಿ: ಕೊರೊನಾ ನಿಯಂತ್ರಣಕ್ಕಾಗಿ ವಿಶೇಷವಾಗಿ ನಿರ್ಮಿಸಿರುವ ಸುಸಜ್ಜಿತ ಪ್ರಥಮ ಚಿಕಿತ್ಸೆ ಸಂಚಾರಿ ಆಸ್ಪತ್ರೆಯನ್ನು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಘಾಟಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪರಿವರ್ತನೆಗೊಳಿಸಿ ಕೊಡಲಾದ ಈ ಬಸ್ಸಿನಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸಿದ ನಾಲ್ಕು ಬೆಡ್, ಒಂದು ವೆಂಟಿಲೇಟರ್ ಬೆಡ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಈ ಬಸ್ಸಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ಬಸ್ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಬೆಡ್ ಇಲ್ಲದ ಕಾರಣ ಪ್ರಾಥಮಿಕ ಚಿಕಿತ್ಸೆ ಕೊಡಲು ಮೊಬೈಲ್ ಆಸ್ಪತ್ರೆಗಳನ್ನ ಆರಂಭಿಸಲಾಗಿದೆ. ಬೆಂಗಳೂರು, ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿದಂತೆ ಹಲವೆಡೆ ಈ ರೀತಿಯ ಬಸ್ಸುಗಳ ಸಂಚಾರ ಮಾಡಲಿವೆ. ಸದ್ಯ ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಮೂರನೇ ಅಲೆಗೆ ಸಜ್ಜಾಗುವ ದೂರ ದೃಷ್ಟಿಯಿಂದ ಸಾರಿಗೆ ಇಲಾಖೆಯಿಂದ ಇಂಥ ಬಸ್ಸುಗಳನ್ನ ಚಿಕಿತ್ಸೆಗಾಗಿ ಸಂಚಾರಿ ಆಸ್ಪತ್ರೆಗಳನ್ನ ನಿರ್ಮಾಣ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ ದುಂಡಪ್ಪ ಕೋಮಾರ, ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಬಂಗಾರಪ್ಪನವರ, ಉಪ ತಹಶೀಲ್ದಾರ ಮಹಾದೇವ ಬಿರಾದಾರ, ಡಾ.ಬಸನಗೌಡ ಕಾಗೆ, ಡಾ. ಸಿ ಎಸ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕಾಂಗ್ರೆಸ್ ತೊರೆದ ಬಾಂಬೆ ಫ್ರೆಂಡ್ಸ್ ಮರಳಿ ಗೂಡಿಗೆ? ಸಿದ್ದರಾಮಯ್ಯ ಪ್ರತಿಕ್ರಿಯೆ

Spread the loveಬಳ್ಳಾರಿ, ಜೂನ್ 23: ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಪತನಕ್ಕೆ ಕಾರಣರಾದ ಹದಿನೇಳು ಶಾಸಕರ ಪೈಕಿ ಕೆಲವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ