ನವದೆಹಲಿ: ಸೋಂಕಿನ ಹಿನ್ನೆಲೆಯಲ್ಲಿ ಹಲವು ನಿಯಮಗಳು ಜಾರಿ ಇದ್ದರೂ ರೈಲುಗಳಲ್ಲಿ ಟಿಕೆಟ್ ಇಲ್ಲದೆ 27 ಲಕ್ಷ ಮಂದಿ ಪ್ರಯಾಣಿಸಿದ್ದಾರೆ.
ಮಾಹಿತಿ ಹಕ್ಕು ಕಾಯ್ದೆಯ ಮೂಲಕ ಸಲ್ಲಿಸಲಾಗಿದ್ದ ಅರ್ಜಿಗೆ ಉತ್ತರಿಸಿದ ಸಚಿವಾಲಯ 2020 ಏಪ್ರಿಲ್‌ನಿಂದ ಪ್ರಸಕ್ತ ವರ್ಷ ಮಾರ್ಚ್ ವರೆಗೆ 27.57 ಲಕ್ಷ ಮಂದಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾರೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 25ಕ್ಕೂ ಕಡಿಮೆ ಪ್ರಕರಣಗಳು ಎಂದಿದೆ. ಅಷ್ಟೂ ಮಂದಿಯಿಂದ 143.87 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ.
2019-20 ರಲ್ಲಿ 1.10 ಕೋಟಿ ಜನ ಟಿಕೆಟ್ ಖರೀದಿಸದೆ ಪ್ರಯಾಣಿಸಿದ್ದು, 561.73 ಕೋಟಿ ರೂ. ದಂಡ ಪಾವತಿಸಿದ್ದಾರೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.
Laxmi News 24×7