Breaking News

ಮುಖಂಡನ ಸಾವು: ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರ ಮೇಲೆ‌ ದೂರು ದಾಖಲು

Spread the love

ಗದಗ: ಕಾಂಗ್ರೆಸ್ ಯುವ ಮುಖಂಡ ಮಹಾಂತೇಶ ಬೆಳಧಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದವರ ಮೇಲೆ ಪೊಲೀಸರು ದೂರು ದಾಖಲು ಮಾಡಿದ್ದಾರೆ.
ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ.

ಗದಗ ನಗರದ ಗಂಗಾಪೂರ ನಿವಾಸಿಯಾದ ಮಹಾಂತೇಶ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರವಾದ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.
ಜೂನ್ 5 ರಂದು ಗದಗದಲ್ಲಿ ಅವರ ಅಂತ್ಯ ಸಂಸ್ಕಾರ ನಡೆದಿತ್ತು. ಈ ಸಂದರ್ಭದಲ್ಲಿ ಪಾರ್ಥಿವ ಶರೀರ ನೋಡಲು ಹಾಗೂ ಅಂತ್ಯ ಸಂಸ್ಕಾರದಲ್ಲಿ ಅನೇಕ ಜನರು ನಿಯಮ ಉಲ್ಲಂಘಿಸಿ ಭಾಗಿಯಾಗಿದ್ದರು. ಅಷ್ಟೇ ಅಲ್ಲದೇ ಸಾಮಾಜಿಕ ಅಂತರ ಕಾಪಾಡಿರಲಿಲ್ಲ ಹಾಗೂ ಮಾಸ್ಕ್ ಕೂಡ ಧರಿಸಿರಲಿಲ್ಲ. ಈ ಕಾರಣದಿಂದ ದೂರು ದಾಖಲಿಸಲಾಗಿದೆ ಎಂದು ಗದಗನ ಶಹರ ಪೊಲೀಸ ಠಾಣೆ ಪೊಲೀಸರು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ