Breaking News
Home / ಜಿಲ್ಲೆ / ಗದಗ / ಮುಖಂಡನ ಸಾವು: ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರ ಮೇಲೆ‌ ದೂರು ದಾಖಲು

ಮುಖಂಡನ ಸಾವು: ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರ ಮೇಲೆ‌ ದೂರು ದಾಖಲು

Spread the love

ಗದಗ: ಕಾಂಗ್ರೆಸ್ ಯುವ ಮುಖಂಡ ಮಹಾಂತೇಶ ಬೆಳಧಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದವರ ಮೇಲೆ ಪೊಲೀಸರು ದೂರು ದಾಖಲು ಮಾಡಿದ್ದಾರೆ.
ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ.

ಗದಗ ನಗರದ ಗಂಗಾಪೂರ ನಿವಾಸಿಯಾದ ಮಹಾಂತೇಶ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರವಾದ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.
ಜೂನ್ 5 ರಂದು ಗದಗದಲ್ಲಿ ಅವರ ಅಂತ್ಯ ಸಂಸ್ಕಾರ ನಡೆದಿತ್ತು. ಈ ಸಂದರ್ಭದಲ್ಲಿ ಪಾರ್ಥಿವ ಶರೀರ ನೋಡಲು ಹಾಗೂ ಅಂತ್ಯ ಸಂಸ್ಕಾರದಲ್ಲಿ ಅನೇಕ ಜನರು ನಿಯಮ ಉಲ್ಲಂಘಿಸಿ ಭಾಗಿಯಾಗಿದ್ದರು. ಅಷ್ಟೇ ಅಲ್ಲದೇ ಸಾಮಾಜಿಕ ಅಂತರ ಕಾಪಾಡಿರಲಿಲ್ಲ ಹಾಗೂ ಮಾಸ್ಕ್ ಕೂಡ ಧರಿಸಿರಲಿಲ್ಲ. ಈ ಕಾರಣದಿಂದ ದೂರು ದಾಖಲಿಸಲಾಗಿದೆ ಎಂದು ಗದಗನ ಶಹರ ಪೊಲೀಸ ಠಾಣೆ ಪೊಲೀಸರು ಹೇಳಿದ್ದಾರೆ.


Spread the love

About Laxminews 24x7

Check Also

ಸೂಲಗತ್ತಿ ಲಕ್ಷ್ಮೀಬಾಯಿಗೆ ಶಾಂತ ಸಿರಿ ಪ್ರಶಸ್ತಿ

Spread the loveಸಿಂದಗಿ: 600 ಮಹಿಳೆಯರಿಗೆ ಉಚಿತವಾಗಿ ಸಹಜ ಹೆರಿಗೆ ಮಾಡಿಸಿದ ತಾಲ್ಲೂಕಿನ ಯರಗಲ್ ಬಿ.ಕೆ. ಗ್ರಾಮದ ಲಕ್ಷ್ಮೀಬಾಯಿ ಪಂಚಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ