Breaking News

ಮನೆ ಮೇಲೆ ಕಟ್ಟಡದ ಗೋಡೆ ಕುಸಿತ: ಒಬ್ಬರ ಸಾವು, 17 ಮಂದಿ ರಕ್ಷಣೆ

Spread the love

ಮುಂಬೈ: ಬಾಂದ್ರಾದಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಯು ಪಕ್ಕದ ಎರಡು ಅಂತಸ್ತಿನ ಮನೆಯ ಮೇಲೆ ಕುಸಿದಿರುವ ಪರಿಣಾಮ ಸಂಭವಿಸಿರುವ ದುರಂತದಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂದ್ರಾ (ಪೂರ್ವ) ಖೇರ್ವಾಡಿ ರಸ್ತೆಯಲ್ಲಿರುವ ರಜಾಕ್ ಚಾವ್ಲ್‌ನಲ್ಲಿ ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಇದುವರೆಗೆ 17 ಮಂದಿಯನ್ನು ರಕ್ಷಿಸಲಾಗಿದೆ. 28 ವರ್ಷದ ರಿಯಾಸ್ ಅಹ್ಮದ್ ಎಂಬವರು ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯು ಸೇರಿದ್ದಾರೆ ಎಂದು ತಿಳಿಸಿದ್ದಾರೆ. ಅವಘಡ ಸಂಭವಿಸಿದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ 11 ಮಂದಿಯನ್ನು ರಕ್ಷಿಸಿದ್ದಾರೆ.

ಸ್ಥಳೀಯರು ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ ಆರು ಮಂದಿಯ ಜೀವವನ್ನು ಉಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಸಲ್ಮಾನ್ ಖಾನ್ (24), ರಾಹುಲ್ ಕೋತ್ (22), ರೋಹಿತ್ ಕೋತ್ (22) ಹಾಗೂ ಲತಾ ಕೋತ್ (48) ಎಂದು ಗುರುತಿಸಲಾಗಿದ್ದು, ಬಾಂದ್ರಾದ ಬಾಬಾ ಆಸ್ಪತ್ರೆ ಹಾಗೂ ಸಾಂಟಾಕ್ರೂಜ್‌ನ ವಿ.ಎನ್. ದೇಸಾಯಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರು ಚೇತರಿಸಿಕೊಳ್ಳುತ್ತಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ